ಯಾದಗಿರಿ | ಪಿಎಸ್ಐ ಅನುಮಾನಾಸ್ಪದ ಸಾವು : ಶಾಸಕ, ಪುತ್ರನ ವಿರುದ್ಧ ಪ್ರಕರಣ ದಾಖಲು
Update: 2024-08-03 16:14 IST
ಪರಶುರಾಮ
ಯಾದಗಿರಿ : ನಗರ ಠಾಣೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ವಿಚಾರಕ್ಕೆ ಸಂಬಂಧಿಸಿದಂತೆ ಮೃತ ಪರಶುರಾಮ ಪತ್ನಿ ಶ್ವೇತಾ ಅವರು ನೀಡಿದ ದೂರಿನ ಅನ್ವಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು, ಅವರ ಪುತ್ರ ಪಂಪನಗೌಡ ವಿರುದ್ಧ ನಗರ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಸೆಕ್ಷನ್ 352, 102, 108 (3) (5) ಅಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.