×
Ad

ಯಾದಗಿರಿ | ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜದ ತಾಲೂಕು ಸಂಘಟನಾ ಕಾರ್ಯದರ್ಶಿಯಾಗಿ ದೇಸಾಯಿ ನೇಮಕ

Update: 2025-01-20 21:43 IST

ಯಾದಗಿರಿ/ ಸುರಪುರ : ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆಯ ಸುರಪುರ ತಾಲೂಕು ಸಂಘಟನಾ ಕಾರ್ಯದರ್ಶಿಯನ್ನಾಗಿ ದೇಸಾಯಿ ಅವರನ್ನು ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ ನೇಮಕಗೊಳಿಸಿ, ನೇಮಕಾತಿ ಪತ್ರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ, ಸಂಘಟನೆಯ ತತ್ವ ಸಿದ್ದಾಂತಗಳಿಗೆ ಧಕ್ಕೆ ಬರದಂತೆ ಸಂಘಟನೆಯನ್ನು ಬೆಳೆಸುವ ಜೊತೆಗೆ ಹೋರಾಟವನ್ನು ರೂಪಿಸಲು ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸನಗೌಡ ಕಮತಗಿ ಸೇರಿದಂತೆ ಇತರರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News