ಯಾದಗಿರಿ | ವಸತಿ ಶಾಲೆಗಳ ಪ್ರವೇಶಾತಿ ಪರೀಕ್ಷೆಗೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಆದೇಶ
ಡಾ.ಸುಶೀಲಾ ಬಿ.
ಯಾದಗಿರಿ : ಫೆ.15 ರಂದು ನಡೆಯಲಿರುವ ವಸತಿ ಶಾಲೆಗಳ ಪ್ರವೇಶಾತಿ, ಪ್ರವೇಶ ಪರೀಕ್ಷೆಗೆ ಯಾದಗಿರಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು ಪರೀಕ್ಷಾ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ 22 ಪರೀಕ್ಷಾ ಕೇಂದ್ರಗಳಲ್ಲಿ (ಯಾದಗಿರಿ-2, ಶಹಾಪೂರ -5,ಶೋರಾಪುರ-5,ಹುಣಸಗಿ-7,ಗುರಮಠಕಲ್-1 ಹಾಗೂ ವಡಗೇರಾ-2 ಪರೀಕ್ಷೆ ಕೇಂದ್ರಗಳಲ್ಲಿ) ಈ ಪರೀಕ್ಷೆ ನಡೆಯಲಿದ್ದು, ಜಿಲ್ಲಾಧಿಕಾರಿಗಳು ಈ ಎಲ್ಲ ಪರೀಕ್ಷೆ ಕೇಂದ್ರಗಳ ಮುಖ್ಯ ಅಧೀಕ್ಷಕರು ಆಗಿದ್ದು, ನೋಡಲ್ ಅಧಿಕಾರಿಗಳಾದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ನೆರವಾಗಲಿದ್ದಾರೆ.
ಅದರಂತೆ ನೋಡೆಲ್ ಅಧಿಕಾರಿಗಳು ಪರೀಕ್ಷೆಯ ಗೌಪ್ಯ ಸಾಮಗ್ರಿಗಳನ್ನು, ಖಜಾನಾಧಿಕಾರಿಗಳ ಸಮಕ್ಷಮದಲ್ಲಿ ಖಜಾನೆಯಲ್ಲಿ ಸಂರಕ್ಷಿಸಿಡಲು ಸೂಚಿಸಿ ಎಲ್ಲಾ ಪರೀಕ್ಷಾ ಕಾರ್ಯಗಳನ್ನು ನಿಯಮಾನುಸಾರ ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.