×
Ad

ಯಾದಗಿರಿ | ವಕೀಲರನ್ನು ತಡೆದು ಹಲ್ಲೆ, ಜಾತಿ ನಿಂದನೆ ಆರೋಪ : ಇಬ್ಬರ ವಿರುದ್ಧ ಪ್ರಕರಣ ದಾಖಲು

Update: 2025-06-20 16:37 IST

ಯಾದಗಿರಿ : ವಕೀಲರೊಬ್ಬರನ್ನು ತಡೆದು ಮೇಲ್ಜಾತಿಯ ಇಬ್ಬರು ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರಪುರ ತಾಲೂಕಿನ ನಾಗರಾಳ ಗ್ರಾಮದ ಮೇಲ್ಜಾತಿಯವರಿಂದ, ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಯಾವುದೇ ಕಾರಣ ಇಲ್ಲದೆ ದಾರಿಯಲ್ಲಿ ತಡೆದು ಮಲ್ಲಯ್ಯ, ಅರ್ಜುನ ಎನ್ನುವವರು ಅಡ್ಡಗಟ್ಟಿ ಜಾತಿ ನಿಂದನೆ ಮಾಡಿದ್ದಲ್ಲದೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ವಕೀಲ ದುರಗಪ್ಪ ಹೊಸಮನಿ ವಾರ್ತಾಭಾರತಿ ಜೊತೆ ಮಾತನಾಡಿ ಮಾಹಿತಿ ನೀಡಿದ್ದಾರೆ.

ಆರೋಪಿಗಳ ವಿರುದ್ಧ ಬಿ.ಎನ್.ಎಸ್. ಕಲಂ 115(2), 118(1), 126(2), 133, 352, 351 ಮತ್ತು ಎಸ್.ಸಿ/ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ನಡು ರಸ್ತೆಯಲ್ಲಿ ತಡೆದು ಜಾತಿ ನಿಂದನೆ ಮಾಡಿರುವ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದ ವೈರಲ್ ಆಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News