×
Ad

ಯಾದಗಿರಿ | ನೀರಿನ ಹೊಂಡದಲ್ಲಿ ಅನುಮಾನಾಸ್ಪದವಾಗಿ ಯುವಕನ ಮೃತದೇಹ ಪತ್ತೆ

Update: 2024-11-23 20:51 IST

ಯಾದಗಿರಿ : ಬೈಕ್ ಸಹಿತ ನೀರಿನ ಹೊಂಡದಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊರನಹಳ್ಳಿ ಗ್ರಾಮದ ಹೊರವಲಯದಲ್ಲಿ ಶನಿವಾರ ನಡೆದಿದೆ.

ಯಾದಗಿರಿನ ಚಿರಂಜಿವಿ ನಗರದ ನಿವಾಸಿ ಉಮೇಶ್ ದಾವಳರಾಮ್ ದೇವಸಿ (25) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಯುವಕ ಎಂದು ಗುರುತಿಸಲಾಗಿದೆ. ಶಹಾಪುರ ತಾಲೂಕಿನ ದೊರನಹಳ್ಳಿಯ ಬೇವಿನಹಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಕುಟುಂಬದ ಸದಸ್ಯರು ಕೊಲೆ ನಡೆದಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಉಮೇಶ್ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಅನುಮಾನಾಸ್ಪದ ಸಾವು ಎಂದು ಶಹಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News