×
Ad

ಯಾದಗಿರಿ | ಬೈಕ್‌-ಲಾರಿ ನಡುವೆ ಢಿಕ್ಕಿ : ಓರ್ವ ಮೃತ್ಯು, ಮತ್ತೋರ್ವ ಗಂಭೀರ

Update: 2024-11-16 18:20 IST

ಯಾದಗಿರಿ : ಸುರಪುರ ಪಟ್ಟಣದ ಕುಂಬಾರಪೇಟ ಹೊರವಲಯದಲ್ಲಿ ಬೈಕ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶೆಳ್ಳಗಿ ಗ್ರಾಮದ ನಿವಾಸಿ ಹಣಮಂತ್ ಹುರುನಾಥ್ ಭಂಡಾರಿ (18) ಮೃತ ಯುವಕ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೋರ್ವ ಯುವಕ ಬಸವರಾಜ್ ಭಂಡಾರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಶನಿವಾರ ಇಬ್ಬರು ಯುವಕರು ಆಸ್ಪತ್ರೆಗೆಂದು ಪಟ್ಟಣಕ್ಕೆ ಬಂದಿದ್ದರು. ಈ ವೇಳೆ ಕುಂಬಾರಪೇಟದಿಂದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದ ಕಡೆ ಹೋಗುವ ಸಂದರ್ಭದಲ್ಲಿ ಲಾರಿ ಚಾಲಕ ವೇಗವಾಗಿ ಬಂದು ಬೈಕ್ ಗೆ ಢಿಕ್ಕಿ ಹೊಡೆದ್ದಾನೆ ಎನ್ನಲಾಗಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಸುರಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News