×
Ad

ಯಾದಗಿರಿ | ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮ

Update: 2024-11-08 19:53 IST

ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ

ಯಾದಗಿರಿ : ಇಲ್ಲಿನ ಮುಂಡರಗಿ ಗ್ರಾಮದ ಹೊರವಲಯದಲ್ಲಿರುವ ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹತ್ತಿ ನಾಶವಾಗಿರುವ ಘಟನೆ ಶುಕ್ರವಾರ ನಡೆದಿರುವುದಾಗಿ ವರದಿಯಾಗಿದೆ.

ಅವಘಡದ ವೇಳೆ ಸ್ಥಳದಲ್ಲೇ ಇದ್ದ ರೈತರಿಂದ ಬೆಂಕಿ ನಂದಿಸುವ ಕಾರ್ಯ ಬರದಿಂದ ಜರುಗಿತ್ತಾದರೂ ಕೂಡ ಕ್ಷಣಾರ್ಧದಲ್ಲೇ ಲಕ್ಷಾಂತರ ರೂ. ಮೌಲ್ಯದ ಹತ್ತಿ ಬೆಂಕಿಗೆ ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ

ಯಾದಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News