×
Ad

ಯಾದಗಿರಿ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಆರೋಪಿಯ ಬಂಧನ

Update: 2024-11-20 19:43 IST

ಸಾಂದರ್ಭಿಕ ಚಿತ್ರ

ಯಾದಗಿರಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಇಲ್ಲಿನ ಶಹಾಪುರ ತಾಲ್ಲೂಕಿನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗೋಗಿ (ಕೆ)ಗ್ರಾಮದ ಸಂತೋಷ ಶರಣಪ್ಪ (19) ಬಂಧಿತ ಆರೋಪಿ, ಮಂಗಳವಾರ ಮಧ್ಯಾಹ್ನ‌ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಗೋಗಿ (ಕೆ) ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸೈ ದೇವಿಂದ್ರರೆಡ್ಡಿ ನವಾಲಿ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News