×
Ad

ಯಾದಗಿರಿ | ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳಿಗೆ ಆಡಳಿತಾತ್ಮಕ ಪರಿಹಾರ ದೊರಕಬೇಕು: ಶ್ರೀಧರ್ ಸಾಹುಕಾರ

Update: 2025-02-18 17:43 IST

ಯಾದಗಿರಿ : ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಹಾಗೂ ಬೇಡಿಕೆಗಳು ಸಮಂಜಸವಾಗಿದ್ದು, ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಪರಿಹಾರ ದೊರಕಿಸಿಕೊಡಬೇಕೆಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ್ ಸಾಹುಕಾರ ಒತ್ತಾಯಿಸಿದರು.

ಪಟ್ಟಣದ ತಹಶೀಲ್ದಾರ್ ಕಾರ್ಯಾಲಯ ಆವರಣದಲ್ಲಿ ನಡೆಯುತ್ತಿರುವ ಯಾದಗಿರಿ ತಾಲೂಕಿನ ಗ್ರಾಮ ಅಧಿಕಾರಿಗಳ 2ನೇ ಹಂತದ ಅನಿರ್ಧಾಷ್ಟವಧಿ ಮುಷ್ಕರದಲ್ಲಿ ಭಾಗವಹಿಸಿ, ಪ್ರತಿಭಟನೆಯಲ್ಲಿ ತೊಡಗಿದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಎಳೆ ನೀರಿನ ವ್ಯವಸ್ಥೆ ಮಾಡುವ ಮೂಲಕ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ್ ಸಾಹುಕಾರ ಬೆಂಬಲ ಸೂಚಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳನ್ನು ಆಡಳಿತಾತ್ಮಕವಾಗಿ ಪರಿಹರಿಸುವುದರಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಆಗುವುದಿಲ್ಲ, ಸಮಂಜಸವಾದ ಬೇಡಿಕೆಗಳನ್ನು ಈ ಕೂಡಲೇ ಈಡೇರಿಸಿ ಗ್ರಾಮಗಳಲ್ಲಿನ ರೈತರಿಗೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾಉಪಾಧ್ಯಕ್ಷ ಮಲ್ಲು ಕೋಲಿವಾಡ, ಜಿನಕೇರ ಗ್ರಾಮ ಪಂಚಾಯತ ಸದಸ್ಯ ಮರಲಿಂಗ, ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ಶಂಕರ್ ಸೋನರ್, ಸಲ್ಲು ಯಡಳ್ಳಿ, ಸಾಬಯ್ಯಾ ಹಳಗೇರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News