×
Ad

ಯಾದಗಿರಿ | ಆರ್‌ಟಿಇ ಕಾಯ್ದೆ ಕಟ್ಟು ನಿಟ್ಟಾಗಿ ಜಾರಿಗೆ ಸಿಎಂಗೆ ಮನವಿ

Update: 2025-06-15 20:46 IST

ಯಾದಗಿರಿ: ಆರ್‌ಟಿಇ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಗರ್ಜನೆ ಜಿಲ್ಲಾ ಘಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.  

ಯಾದಗಿರಿ ನಗರಕ್ಕೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಗರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಣ ಭೀಮರಾಯ ಭಂಡಾರಿ, ಯಾದಗಿರಿ ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದೆ.  ಎಸೆಸೆಲ್ಸಿ, ಪಿಯುಸಿಯಲ್ಲಿ ಅತೀ ಕಡಿಮೆ ಅಂಕ ಗಳಿಸುವ ಜಿಲ್ಲೆಯಾಗಿದೆ ಎಂದು ಹೇಳಿದ್ದಾರೆ.  

ಬಡ ಮಕ್ಕಳು ಖಾಸಗಿ ಶಿಕ್ಷಣದಿಂದ ವಂಚಿತರಾಗಿದ್ದು, ಶೇ 50ರಷ್ಟು ಗ್ರಾಮೀಣ, ನಗರ ಪ್ರದೇಶದ ಮಕ್ಕಳಿಗೆ ಆರ್ ಟಿಇ ತುಂಬಾ ಅನುಕೂಲವಾಗಲಿದೆ. ಆದ್ದರಿಂದ ಆರ್‌ಟಿಇ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.   

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News