ಯಾದಗಿರಿ | ಚಾರಿತ್ರಿಕ ಪುರುಷ ಸಂತ ಸೇವಾಲಾಲ್ ಜಯಂತಿ ಆಚರಣೆ
Update: 2025-02-15 19:55 IST
ಸುರಪುರ: ನಗರದ ತಹಶಿಲ್ದಾರ್ ಕಚೇರಿಯಲ್ಲಿ ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಸೇವಾಲಾಲ್ ಅವರ 286ನೇ ಜಯಂತಿ ಆಚರಿಸಲಾಯಿತು.
ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಸಂತ ಸೇವಾಲಾಲ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು ಪೂಜೆ ಸಲ್ಲಿಸಿ ಮಾತನಾಡಿ, ಶ್ರಮಿಕ ಕುಟುಂಬದಲ್ಲಿ ಹುಟ್ಟಿದ ಸೇವಾಲಾಲ್ ಅವರ ಕೊಡುಗೆ ಅಪಾರ, ನೊಂದವರ ಕಣ್ಣೀರು ಒರೆಸುತ್ತಿದ್ದರು. ಕೇವಲ ಬಂಜಾರ ಸಮುದಾಯ ಮಾತ್ರವಲ್ಲದೆ ಇತರರ ಸೇವೆ ಸಲ್ಲಿಸಿದ ಮಾನವೀಯತೆಯ ಸಮಾಜ ಸೇವಕರು ಹಾಗೂ ಸಾಕಾರ ಮೂರ್ತಿಗಳಾಗಿದ್ದರು ಎಂದು ಹೇಳಿದರು.
ಗ್ರೇಡ್-2 ತಹಶೀಲ್ದಾರ್ ಮಲ್ಲಯ್ಯ ದಂಡು ಹಾಗೂ ಮುಖಂಡರು ಮತ್ತು ಸಿಬ್ಬಂದಿ ವರ್ಗದವರು ಇದ್ದರು.