ಯಾದಗಿರಿ | ವಡಗೇರಾ ತಾಲೂಕು ಕೇಂದ್ರದಲ್ಲಿ ಕಾಲೇಜು ಮಂಜೂರಿಗೆ ಒತ್ತಾಯ
ವಡಗೇರಾ : ತಾಲೂಕು ಕೇಂದ್ರದಲ್ಲಿ ಸರಕಾರಿ ಪದವಿ ಪೂರ್ವ ಮತ್ತು ಪದವಿ ಮಹಾವಿದ್ಯಾಲಯ ಕಾಲೇಜು ಮಂಜೂರು ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಅಬ್ದುಲ್ ಚಿಗಾನೂರ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾಲೂಕು ಕೇಂದ್ರವಾಗಿ ಸುಮಾರು ಏಳು ವರ್ಷಗಳು ಕಳೆದರೂ ಕೂಡಾ ಕಾಲೇಜು ಇಲ್ಲ. ಇದರಿಂದ ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಲಿಯಲು ತುಂಬಾ ತೊಂದರೆಯಾಗುತ್ತಿದೆ, ಕಾಲೇಜು ಶಿಕ್ಷಣಕ್ಕಾಗಿ ದೂರದ ಶಹಾಪುರ ಯಾದಗಿರಿ ರಾಯಚೂರಿನಂತ ನಗರ ಪ್ರದೇಶಗಳಿಗೆ ಕಾಲೇಜು ಶಿಕ್ಷಣಕ್ಕಾಗಿ ತೆರಳುವಂತಾಗಿದೆ ಇಲ್ಲಿ ಕಾಲೇಜು ಇಲ್ಲದಿರುವುದರಿಂದ ಆದೆಷ್ಟೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅರ್ಧಕ್ಕೆ ಶಿಕ್ಷಣವನ್ನು ಮೊಟುಕುಗೊಳಿಸುತ್ತಿದ್ದಾರೆ ನೂತನ ತಾಲೂಕಿಗೆ ಸುಮಾರು 60 ಕ್ಕೂ ಹೆಚ್ಚು ಹಳ್ಳಿಗಳು ಒಳಪಡುತ್ತವೆ. ಇಲ್ಲಿ ಕಾಲೇಜು ಇಲ್ಲದಿರುವುದು ದುರಾದೃಷ್ಟಕರ ಕಾಲೇಜು ಮಂಜುರಿಗಾಗಿ ಸಂಬಂಧಿಸಿದ ಜನಪ್ರತಿನಿಧಿಗಳು ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಕೂಡಲೇ ಸಂಬಂಧಿಸಿದ ಜನಪ್ರತಿನಿಧಿಗಳು ಅಧಿಕಾರಿಗಳು ವಡಗೇರಾ ತಾಲೂಕು ಕೇಂದ್ರದಲ್ಲಿ ಪದವಿ ಪೂರ್ವ ಮತ್ತು ಪದವಿ ಮಾಹಾವಿದ್ಯಾಲಯ ಮಂಜೂರು ಮಾಡಬೇಕು ಎಂದರು.
ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಚಿಗಾನೂರ ಎಚ್ಚರಿಸಿದ್ದಾರೆ.