×
Ad

ಯಾದಗಿರಿ | ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ : ನ್ಯಾ.ಮರಿಯಪ್ಪ

Update: 2025-06-12 20:46 IST

ಯಾದಗಿರಿ : ಸಮಾಜದಲ್ಲಿ ಬಾಲ ಕಾರ್ಮಿಕ ಪದ್ದತಿಯು ಸಂಪೂರ್ಣ ನಿರ್ಮೂಲನೆಗೆ ಪ್ರತಿಯೊಬ್ಬ ನಾಗರಿಕರ ಸಹಕಾರದ ಅವಶ್ಯಕತೆ ಇದೆ. ಶಿಕ್ಷಣ ವಂಚಿತ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ರೂಪುಗೊಳ್ಳಲು ನೆರವಾಗುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಅವರು ತಿಳಿಸಿದರು.

ಗುರುವಾರ ನಗರದ ಸರಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಯಾದಗಿರಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಇಲಾಖೆ ನಿರ್ಮೂಲನಾ ಯೋಜನಾ ಸೊಸೈಟಿ ಯಾದಗಿರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ -1098/112 ಯಾದಗಿರಿ ರವರ ಸಂಯುಕ್ತ ಆಶ್ರಯದಲ್ಲಿ " ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ "ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ  ಬಾಲ ಕಾರ್ಮಿಕ ಅನಿಷ್ಟ ಪದ್ಧತಿಗಳನ್ನು ತಡೆಯುವಲ್ಲಿ ಸಮಾಜದ ಪ್ರತಿಯೊಬ್ಬ ಪ್ರಜೆಗಳ ಕರ್ತವ್ಯವಾಗಿದೆ. ಪೋಷಕರು ಕುಟುಂಬದಲ್ಲಿ ಬಡತನವಿದೆ ಎಂಬ ಕಾರಣವನ್ನು ಇಟ್ಟು ಮಕ್ಕಳನ್ನು ಕೆಲಸಕ್ಕೆ ಸೇರಿಸುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಇದನ್ನು ಪೋಷಕರು ಅರಿತು ಮಕ್ಕಳನ್ನು ಕೆಲಸಕ್ಕೆ ಕಳಿಸಬಾರದು ಎಂದರು.

ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ :

ಇಂದು ಬೆಳಿಗ್ಗೆ ನಗರದ ತಹಶೀಲ್ದಾರ್‌ ಕಚೇರಿಯಿಂದ ಶಾಸ್ತ್ರಿ ವೃತ್ತ, ಶುಭಾಷ್‌ ವೃತ್ತದ ಮಾರ್ಗವಾಗಿ ಸರಕಾರಿ ಪದವಿ ಮಹಾವಿದ್ಯಾಲಯದ ವರೆಗೆ ಹಮ್ಮಿಕೊಂಡಿದ್ದ  ಜಾಗೃತಿ ಜಾಥಾಕ್ಕೆ  ಚಾಲನೆ ನೀಡಲಾಯಿತು. 

ಹಾಗೆಯೇ ನಗರದ ಜನನಿಬೀಡ ಪ್ರದೇಶಗಳಾದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧದ ಕುರಿತು ಜಾಗೃತಿಯನ್ನು ಮೂಡಿಸಲು ಸ್ಟಾಲ್ ಗಳನ್ನು ನಿರ್ಮಿಸಿ ಮತ್ತು ಸಾರ್ವಜನಿಕ ಪ್ರಕಟಣೆಗಳ ಮೂಲಕ ಜಾಗೃತಿ ಮೂಡಿಸಲಾಯಿತು.

ಬಾಲ ಕಾರ್ಮಿಕ ವಿರೋಧದ ಪ್ರಮಾಣ ವಚನವನ್ನು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಮುಧೋಳ್ ಭೋದಿಸಿದರು.

ಪ್ರಾಸ್ತಾವಿಕ ನುಡಿಯನ್ನು ಕಾರ್ಮಿಕ ಅಧಿಕಾರಿ ಶ್ರೀ ಹರಿ ದೇಶಪಾಂಡೆ ರವರು ನೆರವೇರಿಸಿದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರಣ್ಣಗೌಡ, ನಿರೂಪಣಾ ಅಧಿಕಾರಿ ಪ್ರೇಮ್ ಮೂರ್ತಿ, ಮಕ್ಕಳ ರಕ್ಷಣಾ ಅಧಿಕಾರಿ ನಿರ್ಮಲಾ ಸುರಪುರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ, ಸೇರಿದಂತೆ ಸಂಘ, ಸಂಸ್ಥೆಯ ಮುಖ್ಯಸ್ಥರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಶಾಲಾ ಮತ್ತು ಕಾಲೇಜ್ ವಿದ್ಯಾರ್ಥಿಗಳು, ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ  ಮಕ್ಕಳ ಕ್ಷೇತ್ರದಲ್ಲಿ ಸಾಧನೆಗೈದ ಸಂಘ, ಸಂಸ್ಥೆ, ಹಾಗೂ ವ್ಯಕ್ತಿಗಳನ್ನು ಮತ್ತು ಜಿಲ್ಲಾದ್ಯಂತ ಜಿಲ್ಲಾ ಬಾಲ ಕಾರ್ಮಿಕ ಪದ್ಧತಿ ವಿರೋಧದ ಕುರಿತು ಶಾಲಾ ವಿದ್ಯಾರ್ಥಿಗಳಿಂದ ಆಯೋಜಿಸಿದ  ವಿವಿಧ ಸ್ಪರ್ಧೆಗಳಲ್ಲಿ  ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಉಪನ್ಯಾಸವನ್ನು  ಗುರುಪ್ರಸಾದ್ ವೈದ್ಯ ನೀಡಿದರು, ಕಾರ್ಯಕ್ರಮವನ್ನು  ಮಾಳಪ್ಪ ಯಾದವ್ ನಿರೂಪಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News