ಯಾದಗಿರಿ | ಕಾಮಗಾರಿ ನಿಗದಿತ ಅವಧಿಯೊಳಗೆ ಮುಗಿಸಿ : ಶಾಸಕ ಚೆನ್ನಾರಡ್ಡಿ ಪಾಟೀಲ್ ಸೂಚನೆ
ಯಾದಗಿರಿ : ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಮೂಲಕ ನಿಗದಿತ ಅವಧಿಯಲ್ಲಿ ಕೆಲಸ ಮುಗಿಸಿ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಶುಕ್ರವಾರ ಸಂಜೆ ಇಲ್ಲಿನ ಗಾಂಧಿ ಚೌಕ್ ನಲ್ಲಿ ಹಮ್ಮಿಕೊಂಡಿದ್ದ 2024-25 ನೇ ಸಾಲಿನ ಕೆಕೆಆರ್ ಡಿಬಿ ಮೈಕ್ರೋ, ಸಿಎಂಡಿಕ್ಯೂ ಯೋಜನೆಯಡಿ ಮಂಜೂರಾದ ಸುಮಾರು 9.60 ಕೋಟಿ ರೂ. ವೆಚ್ಚದ ನಗರಕ್ಕೆ ಸಂಬಂಧಪಟ್ಟ ಒಂಬತ್ತು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ನಗರದ ಬಹುತೇಕ ವಾರ್ಡ್ಗಳಲ್ಲಿ ಮತ್ತು ಮುಖ್ಯರಸ್ತೆಗಳಲ್ಲಿ ನಡೆಯುವ ರಾಜಕಾಲುವೆ, ಚರಂಡಿ ನಿರ್ಮಾಣ, ರಸ್ತೆ ವಿಭಜಕ, ಇಂಟರ್ ಲಾಕ್ ನಿರ್ಮಾಣ, ಸಿಸಿ ರಸ್ತೆ, ಸ್ಟೋನ್ ಡಿವೈಡರ್ ಅಳವಡಿಸುವ ಕಾಮಗಾರಿಗಳಿಗೆ ಶಾಸಕರು ಚಾಲನೆ ನೀಡಲಾಗಿದ್ದು, ಎಲ್ಲ ಕೆಲಸಗಳು ಸರಿಯಾಗಿ ಮಾಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕೆಂದರು.
ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನಾಯಕ ಪಾಟೀಲ್, ಪೌರಾಯುಕ್ತ ಉಮೇಶ ಚವ್ಹಾಣ, ಇಂಜಿನಿಯರ್ ರಜನಿಕಾಂತ ಮತ್ತು ನಗರಸಭೆ ಸದಸ್ಯರು, ಇಲಾಖೆ ಅಧಿಕಾರಿಗಳು ಇದ್ದರು.