ಯಾದಗಿರಿ |ಕ್ರೀಡೆಗೂ ಪಠ್ಯದಷ್ಟೇ ಮಹತ್ವ ನೀಡಿ : ಶಾಸಕ ಚನ್ನಾರೆಡ್ಡಿ ಪಾಟೀಲ್
ಯಾದಗಿರಿ: ಕ್ರೀಡೆಗಳು ಪ್ರತಿ ಮನುಷ್ಯನ ಅವಿಭಾಜ್ಯ ಅಂಗ. ಅದರಲ್ಲೂ ವಿದ್ಯಾರ್ಥಿಗಳು ಪಠ್ಯದಷ್ಟೇ ಮಹತ್ವ ನೀಡಿ ಕ್ರೀಡೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಮೆರೆಯಬೇಕೆಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಕ್ರೀಡಾಕೂಟದ ಕ್ರೀಡಾ ಜ್ಯೋತಿ ಸ್ವೀಕರಿಸಿ ಅವರು ಮಾತನಾಡಿದರು.
ಆಟಗಳಲ್ಲಿ ಸೋಲು, ಗೆಲವು ಇದ್ದುದ್ದೇ. ಸೋತವರು ಯಾವುದೇ ಕಾರಣಕ್ಕೂ ಹಿಂಜರಿಕೆಗೆ ಒಳಗಾಗದೇ ಸೋಲೇ ಗೆಲುವಿನ ಮೆಟ್ಟಿಲು ಎಂದು ಭಾವಿಸಿ ಮತ್ತೇ ಪ್ರಯತ್ನ ಮಾಡಿದರೇ ಗೆಲುವು ನಿಮ್ಮದ್ದೆ ಆಗುತ್ತದೆ ಎಂದರು.
ಹಿಂದಿಗಿಂತ ಈಗ ಕ್ರೀಡೆಗೆ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿವೆ. ದೇಶಿಯ ಕ್ರೀಡೆಗಳಿಗೂ ಉತ್ತೇಜನ ನೀಡುತ್ತಿದೆ. ಶಾಲೆಗಳಲ್ಲಿ ದೈಹಿಕ ಶಿಕ್ಷಕರು ಸಹ ಆಟಗಳಲ್ಲಿ ಮಕ್ಕಳು ಭಾಗವಹಿಸಲು ಪ್ರೇರಿಪಿಸಬೇಕು ಎಂದು ಚನ್ನಾರೆಡ್ಡಿ ಪಾಟೀಲ್ ಹೇಳಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಬಾಬುರಾವ ಕಾಡ್ಲೂರ್, ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಯಪ್ಪಗೌಡ ಹುಡೇದ್, ಶರಣಪ್ಪ ಪಾಟೀಲ್, ಪ್ರೌಢ ಶಾಲಾ ಶಿಕ್ಷಕರಾದ ಅಶೋಕ ಕೆಂಭಾವಿ, ಲಿಪಿಕಾ ನೌಕರರ ಸಂಘದ ಅಧ್ಯಕ್ಷರಾದ ಆದೆಪ್ಪ ಬಾಗ್ಲಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಹಣಮಂತ ಹೊಸಮನಿ, ತಾಲೂಕು ಅಧ್ಯಕ್ಷ ಭೀಮರಾಯ ಬೊಮ್ಮನ್ ಇದ್ದರು.