×
Ad

ಯಾದಗಿರಿ | ಜ.23 ರಂದು ಅಮಿತ್ ಶಾ ಹೇಳಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಸಂಸ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

Update: 2025-01-17 19:11 IST

ಯಾದಗಿರಿ : ದೆಹಲಿಯ ಸಂಸತ್ತಿನಲ್ಲಿ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಜ. 23ರಂದು ಬೆಳಗ್ಗೆ 10: 30 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘಟನೆಯ ಯಾದಗಿರಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಅವರು ಹೇಳಿದರು.

ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ದೆಹಲಿಯ ಸಂಸತ್ತಿನಲ್ಲಿ ಮಾತನಾಡುತ್ತಾ 'ಅಂಬೇಡ್ಕರ್ ಎಂದು ಹೇಳುವುದು ಇಂದು ಒಂದು ಫ್ಯಾಶನ್ ಆಗಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಏಳೇಳು ಜನ್ಮಕ್ಕೂ ಸ್ವರ್ಗ ಪ್ರಾಪ್ತವಾಗುತ್ತಿತ್ತು' ಎಂದು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಸ್ವಲ್ಪವೂ ಹಿಂಜರಿಕೆ ಇಲ್ಲದೆ ತನ್ನ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಈತನ ದೇಶದ್ರೋಹಿ ಮಾತುಗಳನ್ನು ಖಂಡಿಸಬೇಕಾಗಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಆತನ ಬೆನ್ನಿಗೆ ನಿಂತಿದ್ದಾರೆ. ಇಂತಹವರಿಂದ ನಾವು ಪಶ್ಚಾತ್ತಾಪ ಅಥವಾ ನ್ಯಾಯವನ್ನು ಬಯಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

‘ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಪ್ರತಿನಿತ್ಯವೂ ಸ್ಮರಿಸುತ್ತದೆ. ಅವರು ನೀಡಿರುವ ಸಂವಿಧಾನವನ್ನು ಎಲ್ಲರೂ ಸ್ಮರಿಸುತ್ತಾರೆ. ಆದರೆ, ದೇಶದ ಆಡಳಿತ ನಡೆಸುತ್ತಿರುವ ಕೋಮುವಾದಿಗಳು ಅವರನ್ನೇ ಅಪಮಾನ ಮಾಡುತ್ತಿದ್ಧಾರೆ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಜೊತೆಗೆ ಸ್ವಾಭಿಮಾನ ದಲಿತ ಯುವ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಬಿಜೆಪಿಯವರು ಮಾಡುತ್ತಾ ಪಿತೂರಿ ರಾಜಕಾರಣವನ್ನು ಮಾಡುತ್ತಿದೆ ಇದನ್ನು ಕೂಡಾ ನಾವು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.

ಈ ಒಂದು ಬೃಹತ್ ಪ್ರತಿಭಟನೆಯಲ್ಲಿ ಯಾದಗಿರಿ ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಹೋಬಳಿ ಮಟ್ಟದ ದಲಿತಪರ ಚಿಂತಕರು ಮತ್ತು ಹೋರಾಟಗಾರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News