ಯಾದಗಿರಿ | ಪೋಕ್ಸೋ ಪ್ರಕರಣ : ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ
Update: 2026-03-09 22:59 IST
ಯಾದಗಿರಿ : ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜನ ಮುತ್ಯಾ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜಿಲ್ಲಾ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಮುತ್ಯಾ ಅರ್ಜಿ ಸಲ್ಲಿಸಿದ್ದು,ಸೋಮವಾರ ಅದರ ವಿಚಾರಣೆ ನಡೆಸಿದ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮರುಳಸಿದ್ದರಾಧ್ಯ ಅವರು ಜಾಮೀನು ತಿರಸ್ಕರಿಸಿದ್ದಾರೆ. ಇದೀಗ ಮುತ್ಯಾಗೆ ಬಂಧನ ಭೀತಿ ಎದುರಾಗಿದೆ ಎನ್ನಲಾಗುತ್ತಿದೆ. ಜಾಮೀನು ಕೋರಿ ಮಂಗಳವಾರ ಹೈಕೋರ್ಟ್ ಮೆಟ್ಟಿಲು ಎರುವ ಸಾಧ್ಯಗಳಿವೆ ಎಂದು ತಿಳಿದುಬಂದಿದೆ.