ಯಾದಗಿರಿ | ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಪೂರ್ವಭಾವಿ ಸಭೆ
ಸುರಪುರ : ಮೇ 10 ರಂದು ತಾಲೂಕು ಆಡಳಿತದಿಂದ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಹುಸೇನಸಾಬ್ ಎ.ಸರಕಾವಸ್ ತಿಳಿಸಿದರು.
ನಗರದ ತಹಶೀಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಇಲಾಖೆಯ ಅಧಿಕಾರಿಗಳು ಬೆಳಿಗ್ಗೆ ತಮ್ಮ ಕಚೇರಿಗಳಲ್ಲಿ ಆಚರಣೆ ಮಾಡಿ, ನಂತರ ತಾಲೂಕು ಆಡಳಿತದ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.
ಅಲ್ಲದೆ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು, ಗ್ರಾಮ ಪಂಚಾಯತಿಗಳು, ಸರಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಆಚರಣೆ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರೆಡ್ಡಿ ಸಮುದಾಯದ ಅನೇಕ ಮುಖಂಡರು ಮಾತನಾಡಿದರು.
ಸಭೆಯಲ್ಲಿ ತಾ.ಪಂ ಇಓ ಬಸವರಾಜ ಸಜ್ಜನ್, ಉಪ ಖಜಾನೆ ಪತ್ರಾಂಕಿತ ಅಧಿಕಾರಿ ಸಣಕೆಪ್ಪ ಕೊಂಡಿಕಾರ್, ಮುಖಂಡರಾದ ರೆಡ್ಡಿ ಸಮಾಜದ ತಾಲೂಕ ಅಧ್ಯಕ್ಷ ಬಾಬುಗೌಡ ಪಾಟೀಲ್ ಅಗತೀರ್ಥ, ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ, ಶಿವಶರಣಪ್ಪ ಹೆಡಗಿನಾಳ, ಯಲ್ಲಪ್ಪ ಹುಲಿಕಲ್, ಚಂದ್ರಶೇಖರ ನಾಯಕ ಬಿಚಗತ್ತಿಕೇರಾ, ಮಲ್ಲಣ್ಣ ಸಾಹುಕಾರ ಜಾಲಿಬೆಂಚಿ, ಸಂಗನಗೌಡ ಧನರಡ್ಡಿ, ವಿರುಪಾಕ್ಷಿ ಕೋನ್ಹಾಳ, ಈರಣ್ಣ ಮುದನೂರ, ರಡ್ಡೆಪ್ಪಗೌಡ, ಶರಣು ಬಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.