ಯಾದಗಿರಿ | ಶ್ಯಾಮ ಪ್ರಸಾದ್ ಮುಖರ್ಜಿ ಅವರ ಹೋರಾಟ ನಮಗೆ ಪ್ರೇರಣಾದಾಯಕ: ವಿಭೂತಿಹಳ್ಳಿ
ಯಾದಗಿರಿ: ಶ್ಯಾಮ ಪ್ರಸಾದ್ ಮುಖರ್ಜಿ ಅವರ ಹೋರಾಟ ನಮಗೆ ಪ್ರೇರಣಾದಾಯಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಅವರು ತಿಳಿಸಿದರು.
ಯಾದಗಿರಿ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರ ಸ್ಮೃತಿ ದಿನ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡೆ ನಾಗರತ್ನ ಕುಪ್ಪಿ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಮಾತನಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಪರುಶುರಾಮ ಕುರಕುಂದಿ, ದೇವೇಂದ್ರನಾಥ ನಾದ,ವೆಂಕಟರೆಡ್ಡಿ ತುಮಕೂರು, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊನಿಗೇರಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ಆರ್ ಸಾಹುಕಾರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ನಾಗಪ್ಪ ಗಚ್ಚಿನಮನಿ, ಕಾರ್ಯಾಲಯ ಕಾರ್ಯದರ್ಶಿ ಚನ್ನವೀರಯ್ಯ ಸ್ವಾಮಿ,ಮೋನೇಶ ಬೆಳಿಗೇರಿ, ಲಕ್ಷ್ಮಿಪುತ್ರ ಮಾಲಿಪಾಟೀಲ, ಚಂದ್ರಕಲಾ ಕೀಲನಕೇರ,ಭೀಮಬಾಯಿ ಶೆಂಡಿಗಿ, ಮಲ್ಲು ಕೊಲಿವಾಡ, ಮಂಜುನಾಥ ವಿಕಾಸ ಚೌವ್ಹಾಣ್, ಚಂದ್ರಶೇಖರ ಕಡೆಸೂರ,ಮರಲಿಂಗ ಕೀಲಕೇರಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.