×
Ad

ಯಾದಗಿರಿ | ನರೇಗಾ ಯೋಜನೆಯ ಸದುಪಯೋಗ ಪಡೆದುಕೊಳ್ಳಿ : ರಾಮಚಂದ್ರಪ್ಪ ಬಸುದೆ

Update: 2025-02-02 19:37 IST

ಗುರುಮಠಕಲ್ : ಪಂಚಾಯತ್ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ನರೇಗಾ ಅಡಿಯಲ್ಲಿ ಕೆಲಸ ಮಾಡಲು ಅನೇಕ ಅವಕಾಶಗಳಿದ್ದು, ಇದನ್ನು ಬಳಸಿಕೊಂಡು ಕಾರ್ಮಿಕರು ಸದುಪಯೋಗ ಪಡೆದುಕೊಳ್ಳಿ ಎಂದು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ರಾಮಚಂದ್ರಪ್ಪ ಬಸುದೆ ಅವರು ಹೇಳಿದರು.

ತಾಲೂಕಿನ ಕಾಕಲವಾರ ಗ್ರಾಮ ಪಂಚಾಯತ್ ಬೂದೂರು ಗ್ರಾಮದಲ್ಲಿ ಭಾನುವಾರ ʼನರೇಗಾ ದಿನ ಆಚರಣೆʼ ಆಚರಿಸಿ ಮಾತನಾಡಿದ ಅವರು, ನರೇಗಾ ಯೋಜನೆಯ ಸಂಪೂರ್ಣ ಮಾಹಿತಿ ತಿಳಿಸಿದರು.

ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ಕಾಯಕ ಬಂಧು ಹಾಗೂ ಪಂಚಾಯತ್ ಸಿಬ್ಬಂದಿಗಳು ಇದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News