×
Ad

ಯಾದಗಿರಿ | ಸೇವಾಲಾಲ ಮಹಾರಾಜರ ತತ್ವಗಳು, ಆದರ್ಶಗಳು ನಮ್ಮೆಲ್ಲರಿಗೂ ಮಾರ್ಗದರ್ಶನ : ರಾಚಣ್ಣಗೌಡ ಮುದ್ನಾಳ

Update: 2025-02-15 17:06 IST

ಯಾದಗಿರಿ : ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಂತ ಸೇವಾಲಾಲ್ ಜಯಂತಿ ಆಚರಣೆ ಹಿನ್ನೆಲೆ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಅವರು, ಸಂತ ಸೇವಾಲಾಲ್ ಮಹಾರಾಜರು ನೋಂದವರ ಕಣ್ಣೀರು ಒರೆಸಿ, ಆತ್ಮಸ್ಥೆರ್ಯ ತುಂಬುತ್ತಿದ್ದ ಅವರು ಬಂಜಾರ ಸಮುದಾಯಕ್ಕೆ ಮಾತ್ರ ಸೀಮಿತವಾಗದೆ ಎಲ್ಲರಿಗೂ ಸೇವೆ ಸಲ್ಲಿಸುವ ಮೂಲಕ ಮಾನವೀಯತೆಯ ನೈಜ ಸೇವಕರಾಗಿದ್ದರು.

ಅವರ ತತ್ವಗಳು ಮತ್ತು ಆದರ್ಶಗಳು ಸದಾ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಿದೆ, ಹಾಗೂ ಬಂಜಾರ ಸಮಾಜದ ಶ್ರೇಷ್ಠ ದಾರ್ಶನಿಕರಾದ ಸೇವಾಲಾಲ ಮಹಾರಾಜರು, ತಮ್ಮ ಆದರ್ಶ ಮತ್ತು ತತ್ವಗಳ ಮೂಲಕ ಸಮಾಜದ ಸಮಗ್ರ ಅಭಿವೃದ್ಧಿಗೆ ಶ್ರೇಷ್ಠ ಕೊಡುಗೆ ನೀಡಿದ ಮಹಾನ್ ಪುರುಷರು. ಅವರ ಜೀವನ ಸಂದೇಶ ಇಂದು ಸಹ ನಾವು ಕೈಗೊಳ್ಳಬೇಕಾದ ಮಾರ್ಗದರ್ಶನವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕುಲಲಿತಾ ಅನಪುರ, ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರೆಡ್ಡಿ, ಬಸವರಾಜ ಚಂಡ್ರಿಕಿ, ನಗರಸಭೆ ಉಪಾಧ್ಯಕ್ಷೆ ರುಕೀಯ ಬೇಗಂ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊನಿಗೇರಿ, ನಾಗರಾಜ ಬೀರನೂರು, ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ್ ಸಾಹುಕಾರ, ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್, ಮಲ್ಲಿಕಾರ್ಜುನ ಕಟ್ಟಿಮನಿ , ರಾಜು ಉಪ್ಪಿನ್, ಸೇರಿದಂತೆ ಅನೇಕರು ಕಾರ್ಯಕರ್ತರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News