×
Ad

ಯಾದಗಿರಿ: ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿದ್ದ ಮೂವರು ಮೃತ್ಯು

Update: 2025-07-07 13:38 IST

ಯಾದಗಿರಿ: ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿಯುಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಒಂದೇ ಗ್ರಾಮದ ಮೂವರು  ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ.

ದೇವಿಕೆಮ್ಮ ಹೊಟ್ಟಿ(48) ವೆಂಕಮ್ಮ (60) ರಾಮಣ್ಣ ಪೂಜಾರಿ(50) ಮೃತರು. ಕಳೆದ ಹತ್ತು ದಿನಗಳಿಂದ ವಾಂತಿ-ಭೇದಿಯ ಕಾರಣದಿಂದ ಬೇರೆ ಬೇರೆ ಖಾಸಗಿ, ಸರ್ಕಾರಿ ಆಸ್ಪತ್ರೆಗೆದಾಖಲಾಗಿದ್ದರು.  ಆದರೆ ಸೋಮವಾರ (ಜು. 07) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆರು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇನ್ನೂ 20 ಜನ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ.

ತಿಪ್ಪನಟಗಿ ಗ್ರಾಮಕ್ಕೆ ಸ್ಥಳಕ್ಕೆ, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ ಬಿರಾದಾರ ಸೂಚನೆ ಆದೇಶಿಸಿದ್ದಾರೆ. 

ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News