×
Ad

ಯಾದಗಿರಿ | ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

Update: 2025-01-28 18:40 IST

ಸುರಪುರ : ಖಾಸಗಿ ಫೈನಾನ್ಸ್ ಕಂಪನಿಯವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರಪುರ ನಗರದ ರಂಗಂಪೇಟೆಯ ತಿಮ್ಮಾಪುರಿನಲ್ಲಿ ಮಂಗಳವಾರ ಮಧ್ಯಾಹ್ನ ವೇಳೆ ನಡೆದಿದೆ.

ಮಲ್ಲು ಕಾಳಿಕಾರ್ (40) ಆತ್ಮಹತ್ಯೆಗೈದ ವ್ಯಕ್ತಿ ಎಂದು ತಿಳಿದುಬಂದಿದೆ.

ಖಾಸಗಿ ಫೈನಾನ್ಸ್ ಕಂಪನಿಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ.

ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ತಿಳಿಸಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News