ಯಾದಗಿರಿ| ಸೂಗೂರು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ: ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಸೂಚನೆ
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಸೂಗೂರು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಹಾಗೂ ಜಾತಿ ತಾರತಮ್ಯ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಡಿಸಿ ರಾಹುಲ್ ಪಾಂಡ್ವೆ, ಎಸ್ ಪಿ ಪೃಥ್ಚಿಕ್ ಶಂಕರ್ ಅವರಿಗೆ ಸೂಚಿಸಿದರು.
ವಾರ್ತಾ ಭಾರತಿ ಪತ್ರಿಕೆಯಲ್ಲಿ ಈ ಬಗ್ಗೆ ಪ್ರಕಟಗೊಂಡ ಸಮಗ್ರ ವರದಿ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಸಚಿವರ ಗಮನ ಸೆಳೆದಾಗ, ಅದಕ್ಕೆ ಸ್ಪಂದಿಸಿದ ಸಚಿವರು ಈ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದಾರೆ.