ಯಾದಗಿರಿ| ರೈತನ ಜಮೀನಿನಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಹತ್ತಿ ಸುಟ್ಟು ಭಸ್ಮ
Update: 2025-12-02 18:18 IST
ಯಾದಗಿರಿ: ಸುರಪುರ ತಾಲೂಕಿನ ಕೆಂಭಾವಿ ಗ್ರಾಮದಲ್ಲಿ ರೈತನ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಹತ್ತಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಶಿವಶರಣಪ್ಪ ಹುಣಶ್ಯಾಳ ಎಂಬ ರೈತನಿಗೆ ಸೇರಿದ ಸುಮಾರು 75 ಕ್ವಿಂಟಾಲ್ ಹತ್ತಿ ಬೆಂಕಿಗಾಹುತಿಯಾಗಿ 7 ಲಕ್ಷ ರೂ. ನಷ್ಟ ಆಗಿರುವುದು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಈ ಕುರಿತು ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.