×
Ad

ಯಾದಗಿರಿ: ಬೈಕ್, ಆಟೋ ಢಿಕ್ಕಿ; ಓರ್ವ ಮೃತ್ಯು, ಇಬ್ಬರಿಗೆ ಗಂಭೀರ‌ ಗಾಯ

Update: 2025-11-18 14:29 IST

ಸುರಪುರ: ನಗರದ ರಂಗಂಪೇಟೆಯ ಸರ್ವಜ್ಞ ವೃತ್ತದ ಬಳಿಯ ಬಸ್ ನಿಲ್ದಾಣ ಬಳಿ ಸುರಪುರ-ಶಹಾಪುರ ಮುಖ್ಯ ರಸ್ತೆಯಲ್ಲಿ ಟಂಟಂ ಆಟೋ ಹಾಗೂ ಬೈಕ್ ‌ ಮುಖಾಮುಖಿ ಢಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಶಹಾಪುರ ತಾಲೂಕಿನ ಶಾರದಹಳ್ಳಿ ಗ್ರಾಮದ ಶಿವರಾಜ ಪೂಜಾರಿ (16) ಮೃತ ಯುವಕ.  ಶಹಾಪುರದಲ್ಲಿ ಪ್ರಥಮ ವರ್ಷದ ಪಿಯುಸಿ ಓದುತ್ತಿರುವ ಈತ ನಗರದ ಹಸನಾಪುರದಲ್ಲಿನ ಸಂಬಂಧಿಕರ ಮನೆಯಿಂದ ಮರಳುವ ವೇಳೆ ಘಟನೆ ನಡೆದಿದೆ. ತಲೆಗೆ ಬಲವಾದ ಪೆಟ್ಟು ಬಿದ್ದಿರುವುದರಿಂದ ಸ್ಥಳದಲ್ಲಿಯೇ ಶಿವರಾಜ ಸಾವನ್ನಪ್ಪಿದ್ದಾನೆ.

ದ್ವಿಚಕ್ರ ವಾಹನದ ಹಿಂದೆ ಕುಳಿತಿರುವ ಸಿದ್ದಪ್ಪ ಎನ್ನುವ ಬಾಲಕನಿಗೂ ಗಂಭೀರ ಗಾಯವಾಗಿದ್ದು, ನಗರದದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಟೋದಲ್ಲಿದ್ದ ಮಹಿಳೆಯೊಬ್ಬಳು ಕೆಳಗೆ ಬಿದ್ದು ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ಅವರು ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಘಟನೆಯಿಂದ ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿ ವಾಹನ ಸವಾರರು ಪರದಾಡುವಂತಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಕೃಷ್ಣಾ ಸುಬೇದಾರ್, ಎಎಸ್ಆಯ್ ಮನೋಹರ ರಾಠೋಡ್ ಹಾಗೂ ಪೋಲಿಸ್ ಸಿಬ್ಬಂದಿ ವಾಹನಗಳಿಗೆ ಹೋಗಲು ಅನುಕೂಲ ಮಾಡಿಕೊಟ್ಟರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News