×
Ad

ಯಾದಗಿರಿ| ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.4ರಂದು ಬಿಜೆಪಿಯಿಂದ ಪ್ರತಿಭಟನೆ

Update: 2025-12-02 18:23 IST

ಯಾದಗಿರಿ: ರೈತರಿಗೆ ಸಮರ್ಪಕ ಬೆಳೆ ಪರಿಹಾರ ವಿತರಿಸುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.4 ರಂದು ನಗರದ ಸುಭಾಷಚಂದ್ರ ಬೋಸ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪ ವಿಭೂತಿಹಳ್ಳಿ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೊಷ್ಠಿಯಲ್ಲಿ ಮತನಾಡಿದ ಬಸವರಾಜಪ್ಪ ವಿಭೂತಿಹಳ್ಳಿ, ಬೆಳೆ ಪರಿಹಾರ ಸಂಪೂರ್ಣ ರೈತರಿಗೆ ಸಿಗುತ್ತಿಲ್ಲ. ತೊಗರಿ, ಭತ್ತದ ಕೇಂದ್ರಗಳು ತೆರೆದಿಲ್ಲ. ರೈತರಿಂದ ಖರೀದಿ ಮಾಡಲು ಇರುವ ಕಠಿಣ ನಿಯಮಗಳು ತೆರವುಗೊಳಿಸಬೇಕೆಂದು ಅವರು ರಾಜ್ಯ ಸರಕಾರಕ್ಕೆ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ‌ ಮುಖಂಡರಾದ ರಾಚಣ್ಣಗೌಡ ಮುದ್ನಾಳ್, ಮಹೇಶ್ ಗೌಡ ಮುದ್ನಾಳ್ ಸಹಿತ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News