×
Ad

ಯಾದಗಿರಿ | ಫೋನ್‌ ಪೇ ಮೂಲಕ ಲಂಚ ಸ್ವೀಕಾರ : ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ

Update: 2025-05-29 19:58 IST

ಯಾದಗಿರಿ: ಈರುಳ್ಳಿ ಶೆಡ್‌ ನಿರ್ಮಾಣದ ಸಬ್ಸಿಡಿ ಹಣದಲ್ಲಿ ರೈತನಿಂದ 5 ಸಾವಿರ ರೂ. ಫೋನ್ ಪೇ ಮೂಲಕ ಲಂಚ ಪಡೆದ ಯಾದಗಿರಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವದತ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬದ್ದೆಪಲ್ಲಿ ಗ್ರಾಮದ ರೈತ ಶಂಕರಪ್ಪ ಈರುಳ್ಳಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದರು. ಅವರಿಗೆ ಸರಕಾರ 80,000ರೂ. ಸಬ್ಸಿಡಿ ಹಣ ಮಂಜೂರು ಮಾಡಿತ್ತು. ಸಬ್ಸಿಡಿ ಹಣದಲ್ಲಿ ಸುಮಾರು 20,000 ರೂ. ನೀಡುವಂತೆ ಶಿವದತ್ತ ಬೇಡಿಕೆ ಇಟ್ಟಿದ್ದ. ಗುರುವಾರ ರೈತ ಶಂಕರಪ್ಪನಿಗೆ ಲಂಚದ ಹಣ ವರ್ಗಾವಣೆ ಮಾಡಲು ಫೋನ್ ಪೇ ನಂಬರ್ ನೀಡಿದ್ದ.  5,000 ರೂ. ಹಣವನ್ನು ಫೋನ್ ಪೇ ಮೂಲಕ ಜಮೆ ಮಾಡಿದ ರೈತ ಬಳಿಕ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ.  

ಇದರಿಂದಾಗಿ ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್, ಡಿವೈಎಸ್ಪಿ ಜೆ.ಎಚ್.ಇನಾಂದಾರ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳಾದ ಸಿದ್ದರಾಯ, ಸಂಗಮೇಶ ಅವರ ನೇತೃತ್ವದ ತಂಡ ಯಾದಗಿರಿಯ ಅಂಬೇಡ್ಕರ್ ನಗರದಲ್ಲಿರುವ ತೋಟಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.

ಅಧಿಕಾರಿ ಶಿವದತ್ತನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿಗಳಾದ ಸತೀಶ್, ಅಮರನಾಥ, ರಾಮುನಾಯಕ, ಮಲ್ಲಮ್ಮ, ನವೀನ್, ಗಂಗಾಧರ, ಸುಮತಿ , ಮಲ್ಲಪ್ಪ, ಖಾಸೀಂ, ಮಲ್ಲಿನಾಥ, ಮಲ್ಲಿಕಾರ್ಜುನ ಮಡಿವಾಳ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News