ಯಾದಗಿರಿ | ಭತ್ತದ ಗದ್ದೆಯಲ್ಲಿ ಮೊಸಳೆ ಪತ್ತೆ
Update: 2026-08-09 18:49 IST
ಯಾದಗಿರಿ: ಭೀಮಾನದಿಗೆ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ರೈತರ ಜಮೀನಿಗೆ ನುಗ್ಗಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ಜಿಲ್ಲೆಯ ವಡಿಗೇರಾ ತಾಲೂಕಿನ ಬೀರನಾಳ ಗ್ರಾಮದ ಭೀಮಾ ನದಿ ತೀರದ ಗದ್ದೆಯಲ್ಲಿ ಮೊಸಳೆ ಕಂಡು ರೈತ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಸ್ಥಳೀಯರ ಸಹಾಯದಿಂದ ಮೊಸಳೆ ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಇದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.