×
Ad

ಯಾದಗಿರಿ | ನಗರದ ವಿವಿಧೆಡೆಗೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಭೇಟಿ, ಪರಿಶೀಲನೆ

Update: 2025-07-22 19:35 IST

ಯಾದಗಿರಿ: ನಗರದ ನಗರಸಭೆಯ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಜಲಶುದ್ದೀಕರಣ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳಾದ ಹರ್ಷಲ್ ಭೋಯರ್ ಅವರು ಮಂಗಳವಾರದಂದು ದಿಢೀರನೆ ಭೇಟಿ ನೀಡಿ, ಪರಿಶೀಲಿಸಿದರು.

ಈ ವೇಳೆ ಜಿಲ್ಲಾಧಿಕಾರಿಗಳಾದ ಹರ್ಷಲ್ ಭೋಯರ್ ಅವರು ಮಾತನಾಡಿ, ಮಳೆಗಾಲ ಇರುವುದರಿಂದ ನಗರದಲ್ಲಿ ಕೊಳಚೆ ನೀರು ಸಂಗ್ರಹವಾದರೆ ಡೆಂಗ್ಯೂ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ‌ ನಗರದಲ್ಲಿ ಕೊಳಚೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಮತ್ತು ಸಾರ್ವಜನಿಕರಿಗೆ ಡೆಂಗ್ಯೂ ಜ್ವರದ ಕುರಿತು ಜಾಗೃತಿ ಮೂಡಿಸಲು ಸೂಕ್ತ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ನಗರದ ಎಲ್ಲಾ ವಾರ್ಡ್‌ಗಳಲ್ಲಿ ಮನೆ ಮನೆ ಸಂಗ್ರಹಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು. Black spotಗಳನ್ನು ಗುರುತಿಸಿ ತುರ್ತಾಗಿ ಕಸ ವಿಲೇವಾರಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಈ ವೇಳೆ ನಿರ್ದೇಶನ ನೀಡಿದರು.

ಏಕ ಬಳಕೆ ಪ್ಲಾಸ್ಟಿಕ ನಿಷೇಧ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಜೊತೆಗೆ ಸಣ್ಣ ವ್ಯಾಪಾರಿಗಳಿಗೆ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸಿ ಒಂದು ವೇಳೆ ಪ್ಲಾಸ್ಟಿಕ್ ಬಳಸುವುದು ಕಂಡು ಬಂದಲ್ಲಿ ದಾಳಿ ಮಾಡಿ ದಂಡ ವಿಧಿಸಬೇಕು. ಕುಡಿಯುವ ನೀರಿನ ಸ್ವಚ್ಛತೆಗೆ ಕಡೆಗೆ ವಿಶೇಷ ಗಮನಹರಿಸಿ ನಗರದ ಜನತೆಗೆ ಶುದ್ದ ಕುಡಿಯುವ ನೀರನ್ನು ಪೂರೈಸಲು ಕ್ರಮವಹಿಸಬೇಕು. ಜಲಶುದ್ದೀಕರಣ ಘಟಕವನ್ನು ನಿಯತವಾಗಿ ಸ್ವಚ್ಛಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News