ಯಾದಗಿರಿ | ಮದ್ಯ ಮಾರಾಟ ನಿಷೇಧಾಜ್ಞೆ ಜಾರಿಗೊಳಿಸಲು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೂಚನೆ
Update: 2025-03-12 20:15 IST
ಯಾದಗಿರಿ : ಮಾ.13 ರಿಂದ 14 ರವರೆಗೆ ಹೋಳಿಹಬ್ಬ ಆಚರಣೆಯ ಹಿನ್ನೆಲೆ 2025ರ ಮಾ.13ರ ಗುರುವಾರ ರಂದು ಬೆಳಿಗ್ಗೆ 6 ಗಂಟೆಯಿಂದ 2025ರ ಮಾ.15ರ ಶನಿವಾರ ರಂದು ಬೆಳಿಗ್ಗೆ 6 ಗಂಟೆಯ ವರೆಗೆ ಮದ್ಯಪಾನ ಹಾಗೂ ಮದ್ಯ ಮಾರಾಟ ನಿಷೇಧಾಜ್ಞೆಯನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಯಾದಗಿರಿ ಜಿಲ್ಲೆಯಾದ್ಯಂತ 2025ರ ಮಾ.13ರ ಗುರುವಾರ ರಂದು ಬೆಳಿಗ್ಗೆ 6 ಗಂಟೆಯಿಂದ 2025ರ ಮಾರ್ಚ್ 15ರ ಶನಿವಾರ ರಂದು ಬೆಳಿಗ್ಗೆ 6 ಗಂಟೆಯ ವರೆಗೆ ಎಲ್ಲಾ ವೈನ್‌ಶಾಪ್, ಬಾರ್‌ಗಳು ಸಗಟು ಮತ್ತು ಚೀಲರೆ ಮಧ್ಯ ಮಾರಾಟ ನಿಷೇಧಿಸಿ ಆದೇಶಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.