ಯಾದಗಿರಿ| ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿಶ್ವನಾಥರೆಡ್ಡಿಗೆ ಸನ್ಮಾನ
ಯಾದಗಿರಿ: ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಜಿಲ್ಲಾ ಸಹಕಾರಿ ಒಕ್ಕೂಟ ಯೂನಿಯನ್ ಅಧ್ಯಕ್ಷರಾದ ವಿಶ್ವನಾಥರೆಡ್ಡಿ ದರ್ಶನಾಪುರ ಅವರಿಗೆ ಯಾದಗಿರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಧ್ಯಕ್ಷರಾದ ಸಿದ್ದಪ್ಪ. ಎಸ್ ಹೊಟ್ಟಿ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಶ್ವನಾಥರೆಡ್ಡಿ, ಸಹಕಾರಿ ಕ್ಷೇತ್ರದಲ್ಲಿ ನಾನು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಇದರಿಂದ ಜವಾಬ್ದಾರಿ ಹೆಚ್ಚಿದೆ. ಜಿಲ್ಲೆಯು ಸಹಕಾರಿ ರಂಗದಲ್ಲಿ ಹಿಂದುಳಿದಿದ್ದು ಸಹಕಾರಿ ಕ್ಷೇತ್ರವನ್ನು ಬಲವರ್ಧನಗೊಳಿಸಲು ಶ್ರಮಿಸುವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿದ್ದಪ್ಪ ಹೊಟ್ಟಿ ಅವರು ಮಾತನಾಡಿ, ವಿಶ್ವನಾಥರೆಡ್ಡಿ ದರ್ಶನಾಪುರವರು ಸಹಕಾರಿ ಕ್ಷೇತ್ರಕ್ಕೆ ತಮ್ಮದೆಯಾದ ಕೊಡುಗೆಯನ್ನು ನೀಡಿದ್ದಾರೆ. ಅವರು ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಿನ ಅನುಭವ ಹೊಂದಿದ್ದು ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಪ್ರತ್ಯೇಕವಾಗಿ ಡಿಸಿಸಿ ಬ್ಯಾಂಕ್ ತರುವ ಮೂಲಕ ಈ ಭಾಗದ ರೈತರಿಗೆ ಅನುಕೂಲ ಕಲ್ಪಿಸಲಿ ಎಂದು ಹೇಳಿದರು.
ಈ ವೇಳೆ ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಪ್ರಕಾಶ ಅಂಗಡಿ ಕನ್ನೆಳ್ಳಿ, ಮಹದೇವಪ್ಪ ಅಬ್ಬೆತುಮಕೂರ, ಚನ್ನಪ್ಪ ಠಾಣಗುಂದಿ, ಅಯ್ಯನಗೌಡ ಕಾಶಪ್ಪನಳ್ಳಿ , ದೇವರಾಜ ವರ್ಕನಳ್ಳಿ, ಮಡಿವಾಳಪ್ಪ ಪಾಟೀಲ್ ಹೆಗ್ಗಣದೊಡ್ಡಿ ಹಾಗೂ ಶಹಪುರ ತಾಲೂಕ ಕ.ಸಾ. ಪ ಅಧ್ಯಕ್ಷ ಡಾ. ರವೀಂದ್ರ ಹೊಸಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.