×
Ad

ಯಾದಗಿರಿ | ಸಚಿವ ಪ್ರಿಯಾಂಕ ಖರ್ಗೆ ಹುಟ್ಟು ಹಬ್ಬದ ಪ್ರಯುಕ್ತ ಅನ್ನದಾಸೋಹ

Update: 2025-11-22 21:03 IST

ಸುರಪುರ: ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರ ಜನ್ಮದಿನದ ಅಂಗವಾಗಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಅನ್ನದಾಸೋಹ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಸಕ ರಾಜಾ ವೇಣುಗೋಪಾಲ್‌ ನಾಯಕ್‌ ಮಾತನಾಡಿ, ಪ್ರಿಯಾಂಕ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಒಬ್ಬ ಮಾದರಿ ರಾಜಕಾರಣಿಯಾಗಿದ್ದಾರೆ.  ಅವರು ಪಂಚಾಯತ್ ರಾಜ್ ಮತ್ತು ಐಟಿಬಿಟಿ ಸಚಿವರಾಗಿ ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಯೋಜನೆಗಳನ್ನು ಮಾಡಿದ್ದಾರೆ ಎಂದು ಹೇಳಿದರು.  

ಈ ಸಂದರ್ಭದಲ್ಲಿ ಕಲಬುರ್ಗಿ ಯಾದಗಿರಿ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ವಿಠ್ಠಲ್ ಯಾದವ್, ಸುರಪುರ ತಾಲೂಕು ವಕ್ಲುತನ ಹುಟ್ಟುವಳಿ ಮಾರಾಟಗಾರ ಸಹಕಾರ ಸಂಘದ ಅಧ್ಯಕ್ಷ ರಾಜಾ ಸಂತೋಷ ನಾಯಕ್‌, ಯೂತ್‌ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ್‌ ನಾಯಕ್‌, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜಶೇಖರ್‌ ಪಾಟೀಲ್ ವಜ್ಜಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಮುಖಂಡರಾದ ಮಲ್ಲಣ್ಣ ಸಾಹುಕಾರ್ ನರಸಿಂಗಪೇಟ, ರಮೇಶ್‌ ದೊರೆ ಆಲ್ದಾಳ, ವೆಂಕಟೇಶ ಬೇಟೆಗಾರ, ಅಬ್ದುಲ್ ಗಫರ್ ನಗನೂರಿ, ವೆಂಕಟೇಶ ಹೊಸಮನಿ, ಮಾಳಪ್ಪ ಕಿರದಳ್ಳಿ, ಸೂಗುರೇಶ ವಾರದ, ಮಹೆಬೂಬ್ ಒಂಟಿ, ನಾಗಪ್ಪ ಚಿಕ್ಕನಹಳ್ಳಿ, ನಾಸಿರ್ ಕುಂಡಾಲೆ, ಅಬ್ದುಲ್ ಅಲೀಂ ಗೋಗಿ, ಶಕೀಲ್ ಅಹ್ಮದ್‌  ಖುರೇಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News