ಯಾದಗಿರಿ | ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿದ್ದ ನಗರಸಭೆ ಮಾಜಿ ಅಧ್ಯಕ್ಷೆ ಚಿಕಿತ್ಸೆ ಫಲಿಸದೆ ಮೃತ್ಯು
Update: 2025-11-14 22:18 IST
ಯಾದಗಿರಿ: ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿದ್ದ ನಗರಸಭೆ ಮಾಜಿ ಅಧ್ಯಕ್ಷೆ ಅಂಜಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನವೆಂಬರ್ 12ರಂದು ಬೆಳಿಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಗರಸಭೆ ಮಾಜಿ ಅಧ್ಯಕ್ಷೆ ಮತ್ತು ಸಮಾಜ ಕಲ್ಯಾಣ ಇಲಾಖೆ ದ್ವೀತಿಯ ದರ್ಜೆ ಸಹಾಯಕಿ ಅಂಜಲಿ ಅವರ ಕಾರನ್ನು ಹಿಮ್ಮೆಟ್ಟಿಸಿಕೊಂಡು ಬಂದ ದುಷ್ಕರ್ಮಿಗಳು ಗ್ರಿನ್ ಸಿಟಿ ಬಳಿ ತಡೆದು ಅವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ಮಾಡಿದ್ದರು.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಂಜಲಿ ಅವರನ್ನು ಗುಲ್ಬರ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್ ರವಾನಿಸಲಾಗಿತ್ತು. ಆದರೆ ಅವರು ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.