×
Ad

ಯಾದಗಿರಿ | ಬೀದಿ ನಾಯಿಗಳು, ಬಿಡಾಡಿ ದನಗಳ ನಿಯಂತ್ರಣಕ್ಕೆ ಸೂಚನೆ

Update: 2025-11-20 19:24 IST

ಯಾದಗಿರಿ : ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಬೀದಿ ನಾಯಿ ಹಾಗೂ ಬಿಡಾಡಿ ದನಕರುಗಳ ನಿಯಂತ್ರಣಕ್ಕೆ ಅವಶ್ಯಕ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿ ಹಾಗೂ ಬಿಡಾಡಿ ದನಕರುಗಳ ನಿಯಂತ್ರಣ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೀದಿ ನಾಯಿಗಳು ಹಾಗೂ ಬಿಡಾಡಿ ದನಕರುಗಳು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಜೊತೆಗೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ನಿಯಂತ್ರಣ ಕ್ರಮಕ್ಕೆ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 21ರ ಒಳಗೆ ಬೀದಿ ನಾಯಿ ಹಾಗೂ ಬಿಡಾಡಿ ದನಗಳ ನಿಯಂತ್ರಣ ಕುರಿತು ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರು ಕ್ರಮ ಕೈಗೊಂಡು ಕ್ರಿಯಾ ಯೋಜನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕರಾದ ರಾಜು ದೇಶಮುಖ್‌, ನಗರಸಭೆ ಆಯುಕ್ತ ಉಮೇಶ ಚವ್ಹಾಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ ಮುಧೋಳ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News