×
Ad

ಯಾದಗಿರಿ | ಪ್ರಿಯಾಂಕ್‌ ಖರ್ಗೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ದಲಿತ ಸಂಘರ್ಷ ಸಮಿತಿ ಖಂಡನೆ

Update: 2025-05-31 20:47 IST

ಯಾದಗಿರಿ : ಬಿಜೆಪಿ ಸೇರಿದ ಬಳಿಕ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರಿಯಾಂಕ್‌ ಖರ್ಗೆ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು  ಕರ್ನಾಟಕ ದಲಿತ ಸಂಘರ್ಷ ಸಮಿತಿ(ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಹೇಳಿದ್ದಾರೆ.  

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಕ್ರಾಂತಿ, ಛಲವಾದಿ ನಾರಾಯಣಸ್ವಾಮಿ ದಲಿತರ ಅಭಿವೃದ್ಧಿ ಕುರಿತು ಯೋಜನೆ ರೂಪಿಸುವ ಬಗ್ಗೆ ಮಾತನಾಡಲಿ. ಅದು ಬಿಟ್ಟು ಅವರು ಖರ್ಗೆಯವರ ಬಗ್ಗೆ ಅವಮಾನಕಾರಿಯಾಗಿ ಹೇಳಿಕೆ ನೀಡುವುದು ಹಾಗೂ ಎನ್.ರವಿಕುಮಾರ್‌ ಅವರು ಕಲಬುರಗಿ ಜಿಲ್ಲಾಧಿಕಾರಿಗಳ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆ ನೀಡಿರುವುದು ಖಂಡನೀಯ. ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಕೂಡಲೇ ಎನ್.ರವಿಕುಮಾರನನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. 

ಎನ್.ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ,ಗೋವಿಂದ ಕಾರಜೋಳ  ವಿರುದ್ಧ ಜೂನ್ 2ರಂದು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ, ಈ ಪ್ರತಿಭಟನೆಯಲ್ಲಿ ನಮ್ಮ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಜನರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಾನಪ್ಪ ಕಟ್ಟಿಮನಿ, ಮಾನಪ್ಪ ಕರಡಕಲ್, ಮಹಾದೇವಪ್ಪ ಬಿಜಾಸಪುರ, ಮಾನಪ್ಪ ಬಿಜಾಸಪುರ, ಹಣಮಂತ ಬಾಂಬೆ, ಬಸವರಾಜ ದೊಡ್ಮನಿ, ಮೂರ್ತಿ ಬೊಮ್ಮನಹಳ್ಳಿ, ಬಸವರಾಜ ಬೊಮ್ಮನಹಳ್ಳಿ, ರವಿಚಂದ್ರ ಬೊಮ್ಮನಹಳ್ಳಿ, ವೀರಭದ್ರಪ್ಪ ತಳವಾರಗೇರ, ಖಾಜಾಹುಸೇನ ಗುಡಗುಂಟಿ, ಮಹೇಶ ಯಾದಗಿರಿ ಸೇರಿದಂತೆ  ಹಲವರು ಉಪಸ್ಥಿತರಿದ್ದರು.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News