ಯಾದಗಿರಿ : ಯಾದಗಿರಿ ತಾಲ್ಲೂಕಿನ ಹತ್ತಿಕುಣಿ ಗ್ರಾಮದಲ್ಲಿರುವ ವಿವಿಧ ಹೋಟೆಲ್ ಹಾಗೂ ಡಾಬಾಗಳ ಮೇಲೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಜಂಟಿ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 13 ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಡಿ.17ರಂದು ಯಾದಗಿರಿ ಉಪನಿರ್ದೇಶಕರು ಹಾಗೂ ಆಹಾರ ನಿರೀಕ್ಷಕರ ನೇತೃತ್ವದ ಅಧಿಕಾರಿಗಳ ತಂಡ ಹತ್ತಿಕುಣಿ ಗ್ರಾಮದ ವಿವಿಧ ಖಾನಾವಳಿ ಮತ್ತು ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿತು. ಈ ವೇಳೆ ವಾಣಿಜ್ಯ ಉದ್ದೇಶಕ್ಕೆ ಬಳಸಬೇಕಾದ ಸಿಲಿಂಡರ್‌ಗಳ ಬದಲಿಗೆ, ಗೃಹ ಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಅಕ್ರಮವಾಗಿ ಬಳಸುತ್ತಿರುವುದು ಪತ್ತೆಯಾಗಿದೆ. ಒಟ್ಟು 13 ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವುಗಳಲ್ಲಿ 12 ಇಂಡೇನ್ ಮತ್ತು ಒಂದು ಎಚ್‌ಪಿ ಸಿಲಿಂಡರ್ ಸೇರಿವೆ.

ಜಪ್ತಿ ಮಾಡಲಾದ ಎಲ್ಲ ಸಿಲಿಂಡರ್‌ಗಳನ್ನು ಹತ್ತಿಕುಣಿ ಗ್ರಾಮದ ಸುಚಿತ್ ಗ್ಯಾಸ್ ಏಜೆನ್ಸಿಗೆ ಹಸ್ತಾಂತರಿಸಲಾಗಿದೆ. ನಿಯಮ ಉಲ್ಲಂಘಿಸಿ ಅಕ್ರಮವಾಗಿ ಸಿಲಿಂಡರ್ ಬಳಸುತ್ತಿದ್ದ ಅಂಗಡಿ ಮಾಲೀಕರ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಯಾದಗಿರಿ ಜಿಲ್ಲಾ ವರದಿಗಾರರು

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ