ಸುರಪುರ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಪೊಲೀಸರು ಬೈಕ್ ಜಾಥಾ ಮೂಲಕ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು.  

ಬೈಕ್ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಡಿವೈಎಸ್‌ಪಿ ಶಿವರಾಜ ಕಟಕಭಾವಿ, ಬೈಕ್ ಸವಾರರು ಎಲ್ಲೆಂದರಲ್ಲಿ ಬೈಕ್‌ ನಿಲ್ಲಿಸುತ್ತಿದ್ದು, ಅಡ್ಡಾದಿಡ್ಡಿ ಬೈಕ್ ನಿಲ್ಲಿಸಿದರೆ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಅಪಾಯವನ್ನು ತಪ್ಪಿಸಬಹುದು. ಅಲ್ಲದೆ ಕಿರಿದಾದ ರಸ್ತೆಗಳ ಪಕ್ಕದಲ್ಲಿ ಅಡ್ಡಾದಿಡ್ಡಿಯಾಗಿ ಬೈಕ್ ಗಳನ್ನು ನಿಲ್ಲಿಸುವುದರಿಂದ ವಾಹನಗಳ ಓಡಾಟಕ್ಕೆ ತುಂಬಾ ತೊಂದರೆ ಉಂಟಾಗುತ್ತಿದೆ. ನಿಮ್ಮ ನಗರದ ಸುಗಮ ಸಂಚಾರ ನಿಮ್ಮ ಕೈಯಲ್ಲಿದೆ, ಆದ್ದರಿಂದ ಬೈಕ್ ಗಳನ್ನು ಪೊಲೀಸರು ಸೂಚಿಸಿದ ಸ್ಥಳಗಳಲ್ಲಿಯೇ ಸರಿಯಾಗಿ ನಿಲ್ಲಿಸುವ ಮೂಲಕ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು. 

ದರ್ಬಾರ್ ರಸ್ತೆ, ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತ, ಹಳೆ ಬಸ್ ನಿಲ್ದಾಣ ಮಾರ್ಗವಾಗಿ ಸಾಗಿದ ಬೈಕ್ ರ್ಯಾಲಿ ಕುಂಬಾರಪೇಟೆ ನಂತರ ಮರಳಿ ಸುರಪುರಕ್ಕೆ ಆಗಮಿಸಿ ರಂಗಪೇಟೆಯಲ್ಲಿಯೂ ರ್ಯಾಲಿ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಯಿತು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor