×
Ad

ಯಾದಗಿರಿ | ಜನಪರ, ದೂರದೃಷ್ಟಿಯ ಬಜೆಟ್ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

Update: 2025-03-07 18:05 IST

ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

ಯಾದಗಿರಿ : ಬುದ್ದ, ಬಸವ, ಅಂಬೇಡ್ಕರ್ ಅವರ ಆಶಯದಂತೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವವನ್ನು ಅಳವಡಿಸಿಕೊಂಡಿರುವ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಹಾಗೂ ರಾಜ್ಯದ ಪ್ರತಿಯೊಬ್ಬ ಪ್ರಜೆಯ ಕಲ್ಯಾಣದಿಂದ ಕೂಡಿದ್ದು ಜನಪರ ಹಾಗೂ ದೂರದೃಷ್ಟಿಯ ಬಜೆಟ್ ಆಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಜನಸಾಮಾನ್ಯರ ಆಶಾವಾದಕ್ಕೆ ಸ್ಪಂದಿಸುತ್ತಾ, ಸಮಗ್ರ ಅಭಿವೃದ್ಧಿ ಮತ್ತು ಸಮತೋಲನದ ದೃಷ್ಟಿಕೋನದೊಂದಿಗೆ ರೂಪುಗೊಂಡ 2025-26ನೇ ಸಾಲಿನ ಜನಪರ, ಪ್ರಗತಿಪರ ಬಜೆಟ್ ಇದಾಗಿದೆ. 4.09 ಲಕ್ಷ ಕೋಟಿ ರೂ. ಗಾತ್ರದ ಈ ಬಜೆಟ್‌ನಲ್ಲಿ ರಾಜ್ಯದ ಆರ್ಥಿಕ ಸಬಲತೆ, ಸಾಮಾಜಿಕ ನ್ಯಾಯ ಹಾಗೂ ಬಲಿಷ್ಠ ಮೂಲ ಸೌಕರ್ಯ ನಿರ್ಮಾಣಕ್ಕೆ ನಾಂದಿಯಾಗಲಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಕೃಷಿ, ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ಕೈಗಾರಿಕಾ ವಲಯಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ.

ರೈತರಿಗೆ ಬಂಪರ್ ಗಿಫ್ಟ್ :

ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ರೈತರಿಗೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚಿನ ಮಹತ್ವ ನೀಡಿದ್ದಾರೆ. ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ ೫೦ ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ ಒದಗಿಸಿದ್ದಾರೆ.

ತೋಟಗಾರಿಕೆ ಅಭಿವರರ್ಧಧಿ ಯೋಜನೆಗೆ 95 ಕೋಟಿ ರೂ. ಅನುದಾನ ಕಲ್ಪಿಸಲಾಗಿದೆ. ದೇಶಿ ತಳಿಗಳ ಬೀಜಕ್ಕಾಗಿ ಬ್ಯಾಂಕ್ ಸ್ಥಾಪನೆ ಪ್ರಸ್ತಾಪಿಸಿದ್ದಾರೆ. ಸುಮಾರು 1.81 ಲಕ್ಷ ರೈತರಿಗಾಗಿ ಹನಿ, ತುಂತುರು ನೀರನ ಘಟಕ ತೆರೆಯಲು ಬರೋಬ್ಬರಿ 440 ಕೋಟಿ ರೂ. ಅನುದಾನ ಬಿಡುಗೆ ಮಾಡಲಾಗಿದೆ. ತೊಗರಿ ಬೆಳೆಗೆ ನೂತನ ತಂತ್ರಜ್ಞಾನ ಅಳವಡಿಸಲು 88 ಕೋಟಿ ರೂ. ಮೀಸಲಿರಿಸಲಾಗಿದೆ. ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಒದಗಿಸಲಾಗಿದೆ. ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ, ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾ ಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು  88 ಕೋಟಿ ರೂ. ಮೀಸಲಿರಿಸಲಾಗಿದೆ.

ಕೃಷಿ ಪ್ರಯೋಗಾಲಯ ತೆರೆಯಲು ರೈತರಿಗೆ ಕಡಿಮೆ ದರದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗುವುದು. ಜೊತೆಗೆ ತಂತ್ರಜ್ಞಾನ ಹೆಚ್ಚಾದಂತೆ ರೈತರನ್ನು ಆಧುನೀಕರಣದತ್ತ ಕೊಂಡೊಯ್ಯಲು ಡಿಜಿಟಲ್ ಕೃಷಿ ಸೇವೆಗಳ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾಪಿಸಲಾಗಿದೆ.

ಜಾನುವಾರುಗಳ ರಕ್ಷಣೆಗೂ ಹೆಚ್ಚಿನ ಮಹತ್ವ ನೀಡಿದ್ದಾರೆ. ಪಶು ಸಂಗೋಪನೆ ಇಲಾಖೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಜಾನುವಾರುಗಳ ಆಕಸ್ಮಿಕ ಸಾವು ತಡೆಗೆ ಕ್ರಮ ಕೈಗೊಳ್ಳಲು ಅನುಗ್ರಹ ಯೋಜನೆ ಪರಿಹಾರ ಮೊತ್ತವನ್ನು ರೂ.10 ಸಾವಿರ ದಿಮದ 15 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ.

ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 250 ಕೋಟಿ ರೂ., ಅಲ್ಪಸಂಖ್ಯಾತರ ಧಾರ್ಇಕ ಕೇಂದ್ರಗಳ ಮುಖ್ಯಸ್ಥರ ಮಾಸಿಕ ಗೌರವ ಧನ 6 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ನೆರೆಯ ಚಿತ್ತಾಪುರದಲ್ಲಿ ಸನ್ನತಿ ಪ್ರಾಧಿಕಾರ ರಚನಿಗೆ ಪ್ರಸ್ತಾಪಿಸಲಾಗಿದೆ. ವಿಶೇಷವಾಗಿ ಮುಸ್ಲಿಂ ಸಮುದಾಯದವರಿಗೆ ಬರಪೂರ ಅನುದಾನ ಕಲ್ಪಿಸಲಾಗಿದೆ. ಮೌಲಾನಾ ಆಜಾದ್ ಪಬ್ಲಿಕ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಲಾಗಿದೆ. ಒಟ್ಟಾರೆ ಇದು ಜನಪರವಾದ ಮತ್ತು ದೂರದೃಷ್ಟಿಯ ಬಜೆಟ್ ಎಂದು ಶಾಸಕ ತುನ್ನೂರು ಅವರು ಬಣ್ಣಿಸಿದ್ದಾರೆ.

ಯಾದಗಿರಿ ಮತಕ್ಷೇತ್ರದ ನೂತನ ತಾಲೂಕು ಕೇಂದ್ರ ವಡಗೇರಾದಲ್ಲಿ ಆಡಳಿತಾತ್ಮಕ ಪ್ರಜಾಸೌಧ ನಿರ್ಮಾಣಕ್ಕೆ ಅಸ್ತು ಎಂದಿದ್ದಾರೆ. ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು ನಿರ್ಮಾಣಕ್ಕೆ 6 ಕೋಟಿ ರೂ. ಮೀಸಲಿರಿಸಲಾಗಿದೆ. ಶಹಾಪುರ ಪಟ್ಟಣದ 100 ಹಾಸಿಗೆಯ ತಾಲೂಕು ಆಸ್ಪತ್ರೆಯನ್ನು 150 ಹಾಸಿಗೆಗೆ ಹೆಚ್ಚಿಸಲಾಗುವುದು. ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ನೀರಾವರಿ ಹಾಗೂ ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಆಧ್ಯತೆ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News