×
Ad

ಯಾದಗಿರಿ | ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ : ಕಾನ್‌ಸ್ಟೇಬಲ್‌ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Update: 2025-04-09 13:46 IST

 ಬಲರಾಮ್

ಯಾದಗಿರಿ : ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಸೈದಾಪುರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್‌ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ರೆಯಾಗಿದ್ದ ನನಗೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಸೈದಾಪುರ ಪೊಲೀಸ್ ಠಾಣೆಯ ಪೇದೆ ಬಲರಾಮ್ ವಿರುದ್ಧ ಯುವತಿಯೋರ್ವಳು ನೀಡಿದ ದೂರಿನ ಮೇರೆಗೆ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಯುವತಿ ಗುರುಮಠಕಲ್ ತಾಲೂಕಿನ ಬದ್ದೇಪಲ್ಲಿ ತಾಂಡಾದ ನಿವಾಸಿ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆʼ ಎಂದು ಎಸ್ಪಿ ಪ್ರಥ್ವಿಕ್ ಶಂಕರ್ ತಿಳಿಸಿದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News