×
Ad

ಯಾದಗಿರಿ | ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು : ಶಾಸಕ ಚೆನ್ನಾರೆಡ್ಡಿ ಪಾಟೀಲ್ ಅಭಿಮತ

Update: 2025-08-25 19:00 IST

ಯಾದಗಿರಿ: ಪಠ್ಯದಷ್ಟೇ ಮಹತ್ವ ಕ್ರೀಡೆಗೂ ಇದ್ದು, ವಿದ್ಯಾರ್ಥಿಗಳು ತಮಗೆ ಆಸಕ್ತಿ ಇರುವ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಸಾಧನೆ ಮೆರೆಯಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ಇಲ್ಲಿನ‌ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಆಟಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ, ಸೋಲೇ ಗೆಲುವಿನ ಮೆಟ್ಟಿಲು ಅಂದು ಕೊಂಡು ಸ್ಪರ್ಧಾಮನೋಭಾವನೆಯಿಂದ ಆಟಗಳನ್ನು ಆಡಬೇಕೆಂದರು.

ಯುಡಾ ಅಧ್ಯಕ್ಷ ಬಾಬುರಾವ ಕಾಡ್ಲೂರ್ ಜಿಲ್ಲಾ ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ ಸೇರಿದಂತೆಯೇ ಇತರರಿದ್ದರು. ಕಬಡ್ಡಿ, ಯೋಗಾಸನ, ವಾಲಿಬಾಲ್, ರನ್ನಿಂಗ್ ಸೇರಿದಂತೆಯೇ ಒಟ್ಟು ಏಳು ಆಟಗಳ ಸ್ಪರ್ಧೆಗಳು ನಡೆದವು.

500ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. 32 ದೈಹಿಕ ಶಿಕ್ಷಕರು ಮತ್ತು ಕ್ರೀಡಾ ಇಲಾಖೆ ಸಿಬ್ಬಂದಿ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News