×
Ad

ಯಾದಗಿರಿ | ನಟ ವಿಷ್ಣುವರ್ಧನ್ ಅವರ ಸಮಾಧಿ ನಾಶ ಮಾಡಿದವರಿಗೆ ಶಿಕ್ಷೆಯಾಗಬೇಕು : ಟಿ.ಎನ್.ಭೀಮುನಾಯಕ್‌

Update: 2025-08-10 19:44 IST

ಯಾದಗಿರಿ: ಹಿರಿಯ ನಟ ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಮಾಡಿದ ಘಟನೆ ಕನ್ನಡದ ಅಸ್ಮಿತೆಗೆ ಮಾಡಿದ ಅವಮಾನವಾಗಿದ್ದು, ಈ ಘಟನೆಯ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷಿಸಬೇಕು ಮತ್ತು ತಕ್ಷಣ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ಟಿ.ಎನ್.ಭೀಮುನಾಯಕ್‌ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕನ್ನಡವನ್ನು ಕಟ್ಟಿ ಎತ್ತಿಹಿಡಿದ ಮೇರು ನಟ ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಕನ್ನಡ ನಾಡು ನುಡಿ ನೆಲ ಜಲ ಕಲೆಗಾಗಿ ಅಪ್ರತಿಮ ಕೊಡುಗೆ ನೀಡಿದ ವಿಷ್ಣುವರ್ಧನ್ ಅವರಿಗೆ ಅವಮಾನ ಆದರೂ ಸರ್ಕಾರ ಸುಮ್ಮನಿರುವುದು ಸರಿಯಲ್ಲ. ಈ ಕುರಿತು ಸರಕಾರ ತಕ್ಷಣ ಕಾರ್ಯಪ್ರವೃತ್ತರಾಗಿ, ತಪ್ಪಿತಸ್ಥರನ್ನು ತನಿಖೆ ನಡೆಸಿ ಪತ್ತೆ ಹಚ್ಚಿ ಶಿಕ್ಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ಅಂಬ್ರೇಷ್ ಹತ್ತಿಮನಿ, ಸಂತೋಷ ನಿರ್ಮಲಕರ್, ಯಮುನಯ್ಯ ಗುತ್ತೇದಾರ, ವಿಶ್ವರಾಜ ಪಾಟೀಲ್, ವೆಂಕಟೇಶ ನಾಯಕ ಬೈರಿಮಡ್ಡಿ, ಅಬ್ದುಲ್ ಚಿಗಾನೂರು, ಶರಣಬಸಪ್ಪ ಯಲ್ಹೇರಿ, ಬಸವರಾಜ ಚೆನ್ನೂರು, ಕಾಶಿನಾಥ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News