ಯಾದಗಿರಿ: ಭೀಮಾ ಮತ್ತು ಕೃಷ್ಣಾ ನದಿಗಳ ದಡದಲ್ಲಿ ಜನಜಂಗುಳಿ ಹೆಚ್ಚಾದ ಬೆನ್ನಲ್ಲೇ ನದಿಗಳ ಸ್ವಚ್ಛತೆಯ ಬಗ್ಗೆಯೂ ಕಾಳಜಿ ವಹಿಸಬೇಕೆಂದು ವಾರ್ತಾಭಾರತಿ ಪತ್ರಿಕೆ ಪ್ರಕಟಿಸಿದ್ದ ವರದಿಗೆ ನಗರಸಭೆ ಅಧಿಕಾರಿಗಳು ಸ್ಪಂದಿಸಿದ್ದಾರೆ.

ಸವದತ್ತಿ ಯಲ್ಲಮ್ಮ ದೇವಿಗೆ ಹಾವು ಸುತ್ತಿಕೊಂಡಿದೆ ಎಂಬ ಗಾಳಿಸುದ್ದಿ ಹರಡಿದ ಹಿನ್ನೆಲೆಯಲ್ಲಿ ನದಿ ತೀರಗಳಲ್ಲಿ ಜನರ ಸಂಖ್ಯೆ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ನದಿಗಳಲ್ಲಿ ಬಟ್ಟೆಗಳನ್ನು ಬಿಟ್ಟು ಹೋಗುತ್ತಿರುವುದರಿಂದ ನದಿಗಳ ಸ್ವಚ್ಛತೆ ಹದಗೆಡುತ್ತಿದೆ ಎಂಬುದರ ಕುರಿತು ವಾರ್ತಾಭಾರತಿ ಪತ್ರಿಕೆ ಮಂಗಳವಾರ (ನ.17) ವರದಿ ಪ್ರಕಟಿಸಿತ್ತು.

ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ನಗರಸಭೆ ಅಧಿಕಾರಿಗಳು, ನದಿಗೆ ಎಸೆಯಲಾಗಿದ್ದ ಹಾಗೂ ನದಿ ದಡದಲ್ಲಿ ಬಿದ್ದಿದ್ದ ಬಟ್ಟೆಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಶರಬು ಬಿ.ನಾಟೇಕಾರ್ ಯಾದಗಿರಿ/ವಾರ್ತಾಭಾರತಿ

ಯಾದಗಿರಿ ಜಿಲ್ಲಾ ವರದಿಗಾರರು

ಶರಬು ಬಿ.ನಾಟೇಕಾರ್ ಅವರು 2018ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಎಂಟು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿ ದಿನಪತ್ರಿಕೆಯ ಯಾದಗಿರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ