ಯಾದಗಿರಿ: ಎಂಟು ತಿಂಗಳ ಹಿಂದೆ ಪೂರ್ಣಗೊಂಡಿದ್ದ ಕಾಮಗಾರಿಯ ಬಿಲ್ ಮಂಜೂರು ಮಾಡಲು 9 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, 3 ಸಾವಿರ ರೂ. ಸ್ವೀಕರಿಸಿದ ಆರೋಪದ ಮೇಲೆ ಸುರಪುರ ಜೆಸ್ಕಾಂನ ಇಬ್ಬರು ಕಿರಿಯ ಎಂಜಿನಿಯರ್‌ಗಳನ್ನು ಯಾದಗಿರಿ ಲೋಕಾಯುಕ್ತ ಪೊಲೀಸರು ಬಲೆಗೆ ಬಿದ್ದಿದ್ದಾರೆ.

ಸುರಪುರ ಜೆಸ್ಕಾಂನ ಕಿರಿಯ ಎಂಜಿನಿಯರ್‌ಗಳಾದ ಸಚಿನ್ ಯಡಕೆ ಮತ್ತು ಶ್ರೀಶೈಲ ತಮ್ಮದಡ್ಡಿ ಆರೋಪಿತರು. ತಿಂಥಣಿ ಗ್ರಾಮದ ದೇವೇಂದ್ರ ಅಂಬಿಗೇರ ಅವರ ಪುತ್ರ ಭೈರಣ್ಣ ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್. ಇನಾಂದಾರ್ ಅವರ ಮೇಲ್ವಿಚಾರಣೆಯಲ್ಲಿ, ಪೊಲೀಸ್ ಇನ್‌ಸ್ಪೆಕ್ಟರ್ ಪ್ರದೀಪ್ ತಲಕೇರಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

ದೂರುದಾರರು ಪೂರ್ಣಗೊಳಿಸಿದ್ದ 3,63,942 ರೂ. ಮೊತ್ತದ ಕಾಮಗಾರಿಗೆ ಸಂಬಂಧಿಸಿದ ಬಿಲ್ ಮಂಜೂರು ಮಾಡಲು ಆರೋಪಿತರು 9 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ 3 ಸಾವಿರ ರೂ. ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿತರನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಯಾದಗಿರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ, 1988ರ ತಿದ್ದುಪಡಿ ಕಾಯ್ದೆಯ ಸೆಕ್ಷನ್ 7(ಎ) ಅಡಿಯಲ್ಲಿ ಅಪರಾಧ ಸಂಖ್ಯೆ 08/2026 ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor