ಯಾದಗಿರಿ: ಜಿಲ್ಲೆಯ ಹುಣಸಗಿ ಪಟ್ಟಣದ ನೀಲಕಂಠೇಶ್ವರ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಲಾಡ್ಜ್ ಮ್ಯಾನೇಜರ್ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಹುಣಸಗಿ ವೃತ್ತದ ಸಿಪಿಐ ರವಿಕುಮಾರ ಎಸ್.ಎನ್. ಅವರಿಗೆ ಲಭಿಸಿದ ಮಾಹಿತಿಯ ಆಧಾರದಲ್ಲಿ, ಶೋಧನಾ ವಾರಂಟ್ ಪಡೆದು ಪಂಚರ ಸಮ್ಮುಖದಲ್ಲಿ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಕೊಠಡಿಯೊಂದರಲ್ಲಿ ಮಹಿಳೆಯೊಬ್ಬರು ಪತ್ತೆಯಾಗಿದ್ದು, ಓರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಬಂಧ ಲಾಡ್ಜ್ ಮ್ಯಾನೇಜರ್ ದಯಾನಂದ ಪೂಜಾರಿ ಮತ್ತು ಇಬ್ರಾಹಿಮ್ ಮುಲ್ಲಾ ವಿರುದ್ಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor