Yadgiri | ರುದ್ರಭೂಮಿಯಲ್ಲಿ ಹೈಮಾಸ್ಟ್ ದೀಪ, ಸುತ್ತುಗೋಡೆ ನಿರ್ಮಾಣಕ್ಕೆ ಮನವಿ

Update: 2026-08-14 19:16 IST

ಯಾದಗಿರಿ: ನಗರದ ಕೋಟಗೆರಾವಾಡ ಪ್ರದೇಶದ ರುದ್ರಭೂಮಿಯಲ್ಲಿ ಹೈಮಾಸ್ಟ್ ದೀಪ ಹಾಗೂ ಸುತ್ತುಗೋಡೆ ನಿರ್ಮಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚಂದಪ್ಪ ಮುನಿಯಪ್ಪನವರ ನೇತೃತ್ವದಲ್ಲಿ ನಿಯೋಗವು ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ಜಿ. ಕುಮಾರ್ ನಾಯಕ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಈ ಕುರಿತು ಮಾತನಾಡಿದ ಚಂದಪ್ಪ ಮುನಿಯಪ್ಪನವರು, ಕೋಟಗೆರಾವಾಡ ರುದ್ರಭೂಮಿಯಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಹಾಗೂ ಸುರಕ್ಷತಾ ಸುತ್ತುಗೋಡೆ ಇಲ್ಲದ ಕಾರಣ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ತಕ್ಷಣ ಹೈಮಾಸ್ಟ್ ದೀಪ ಅಳವಡಿಸುವುದರ ಜೊತೆಗೆ ಸುತ್ತುಗೋಡೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡು ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಸಂಸದರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ವಿವಿಧ ಪದಾಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News