ಯಾದಗಿರಿ | ಜೂ.13, 14ರಂದು ಡ್ರೋನ್, ವಾಯುಯಾನಗಳ ಹಾರಾಟಕ್ಕೆ ನಿಷೇಧ : ಡಿಸಿ ಡಾ.ಸುಶೀಲಾ ಬಿ.
Update: 2025-06-12 20:49 IST
ಯಾದಗಿರಿ : ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜೂ.14ರಂದು ಮುಖ್ಯಮಂತ್ರಿಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಈ ಹಿನ್ನಲೆಯಲ್ಲಿ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಸುತ್ತಮುತ್ತಿನಲ್ಲಿ ಡ್ರೋನ್ ಹಾಗೂ ವಾಯುಯಾನಗಳ ಹಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುಶೀಲಾ ಬಿ. ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಿತ ಪ್ರದೇಶದಲ್ಲಿ ಯಾವುದೇ ರೀತಿಯ ಡ್ರೋನ್ ಹಾಗೂ ವಾಯುಯಾನಗಳ ಹಾರಾಟವನ್ನು ಜೂ.13 ರಿಂದ 14ರ ಕಾರ್ಯಕ್ರಮ ಮುಕ್ತಾಯದವರೆಗೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.