×
Ad

ಯಾದಗಿರಿ | ಬುಧವಾರ ನಗರಕ್ಕೆ ಬಿಜೆಪಿ ಜನಾಕ್ರೋಶ ಯಾತ್ರೆ ಆಗಮಿಸಲಿದೆ : ಆರ್.ಶ್ರೀಧರ್ ಸಾಹುಕಾರ

Update: 2025-04-21 19:28 IST

ಯಾದಗಿರಿ : ಬೆಲೆ ಏರಿಕೆ, ಮುಸ್ಲಿಮರಿಗೆ ಶೇ.4 ಮೀಸಲಾತಿ, ದಲಿತರ ಹಣ ದುರ್ಬಳಕೆ ಸೇರಿ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ನಗರಕ್ಕೆ ಬುಧವಾರ ಆಗಮಿಸಲಿದೆ ಎಂದು ಯುವಮೋರ್ಚಾ ಜಿಲ್ಲಾಧ್ಯಕ್ಷ ಆರ್.ಶ್ರೀಧರ್ ಸಾಹುಕಾರ ಹೇಳಿದರು.

ಜನಾಕ್ರೋಶ ಯಾತ್ರೆ ಬುಧವಾರ ಬೆಳಗ್ಗೆ 9:30ಕ್ಕೆ ತಹಶೀಲ್ದಾರ್ ಕಚೇರಿಯಿಂದ ಸುಭಾಷ್ ಚಂದ್ರ ಬೋಸ್ ವೃತ್ತದ ವರೆಗೆ ಪಾದಯಾತ್ರೆ ಮೂಲಕ ಸಾಗಿ ತೆರೆದ ವಾಹನದಲ್ಲಿ ಸಿದ್ಧಪಡಿಸಿದ ವೇದಿಕೆಯಲ್ಲಿ ಸಮಾವೇಶ ನಡೆಸುವುದಾಗಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಬಿ.ಶ್ರೀರಾಮುಲು, ಬಿಜೆಪಿ ರಾಜ್ಯ ಕಾರ್ಯದರ್ಶಿ ಪಿ.ರಾಜೀವ್, ಎಂಎಲ್‌ಸಿಗಳಾದ ಎನ್.ರವಿಕುಮಾ‌ರ್, ನವೀನ್ ಕೋಟಿಗೆ, ರಾಜ್ಯ ಉಪಾಧ್ಯಕ್ಷರು ರಾಜು ಗೌಡ, ರಾಜ್ಯ ಕಾರ್ಯದರ್ಶಿ ಕು.ಲಲಿತ ಅನಪುರ, ರಾಜ್ಯ ಬಿಜೆಪಿ ಯುವಮೋರ್ಚಾ ತಂಡ, ಸೇರಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News