ಯಾದಗಿರಿ | ರಾಜ್ಯ ಸರ್ಕಾರ ಕೇಂದ್ರದ ಆದೇಶವನ್ನು ಪಾಲಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಯಾದಗಿರಿ : ಪೆಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಭಾರತದಲ್ಲಿರುವ ಪಾಕ್ ಪ್ರಜೆಗಳು ಕೂಡಲೇ ದೇಶ ಬಿಟ್ಟು ಪಾಕಿಸ್ತಾನಕ್ಕೆ ತೆರಳಬೇಕು ಎಂಬ ಆದೇಶ ಹೊರಡಿಸಿದ್ದು, ಆ ಆದೇಶವನ್ನು ಕೂಡಲೇ ರಾಜ್ಯ ಸರಕಾರ ಪಾಲಿಸಿ ಇಲ್ಲಿರುವ ಪಾಕ್ ಪ್ರಜೆಗಳನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಒತ್ತಾಯಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗಲ್ಲಿ ಬಿಜೆಪಿ ವತಿಯಿಂದ ಅಕ್ರಮವಾಗಿ ನೆಲೆಸಿರುವ ಪಾಕ್ ಪ್ರಜೆಗಳನ್ನು ಕೂಡಲೇ ಪಾಕಿಸ್ತಾನಕ್ಕೆ ಕಳಿಸಿ ಕೊಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.
ಅಲೆಮಾರಿ ಅರೆ ಅಲೆಮಾರಿ ನಿಗಮ ಮಾಜಿ ಅಧ್ಯಕ್ಷ ದೆವೀಂದ್ರನಾಥ ನಾದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನ ಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರು, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೋನ್ನದ, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊನಿಗೇರಿ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ, ಪ್ರಭಾವತಿ ಕಲಾಲ್, ಎಮ್.ಕೆ ಬಿರುನೂರ,ಯಾದಗಿರಿ ಗ್ರಾಮೀಣ ಮಂಡಲ ಅಧ್ಯಕ್ಷರ ರಾಜಶೇಖರ ಕಾಡಂನೊರ, ನಗರ ಮಂಡಲ ಅಧ್ಯಕ್ಷರ ಲಿಂಗಪ್ಪ ಹತ್ತಿಮನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷರ ಶ್ರೀಧರ ಆರ್ ಸಾಹುಕಾರ , ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಸುನಿತಾ ಚವ್ಹಾಣ, ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದಪ್ಪ ರಾಮಸಮುದ್ರ, ಮೋನೇಶ ಬೆಳಿಗೇರಿ, ಬಸವರಾಜಗೌಡ ಬಿಳಾರ, ಬಸಣಗೌಡ ಕನ್ಯಕೋಳುರ, ರಾಜೇಶ್ ಜೈನ, ಮಲ್ಲಿಕಾರ್ಜುನ ಕಟ್ಟಿಮನಿ, ಗೋಪಾಲ ದಾಸನಕೆರಿ, ಶಕುಂತಲಾ ಜಿ., ಭೀಮಬಾಯಿ ಶೆಂಡಿಗಿ, ಚನ್ನವೀರಯ್ಯ ಸ್ವಾಮಿ,ಮಂಜುನಾಥ ಗುತ್ತಿಗೆದಾರ, ಮಲ್ಲು ಕೊಲಿವಾಡ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೆಸೂರ, ನಾಗರಡ್ಡಿ ಇಬ್ರಾಹಿಂಪುರ, ಶ್ರೀಕಾಂತ್ ಸುಂಗಲಕರ್, ಸಲ್ಮಾ ಯಡ್ಡಳ್ಳಿ, ಶರಣ್ಣಪ್ಪ ಟೊಕಾಪುರು, ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾ, ಪ್ರಕೋಷ್ಠದ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.