×
Ad

ಯಾದಗಿರಿ | ಭೀಮಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಓರ್ವನ ಮೃತದೇಹ ಪತ್ತೆ

Update: 2025-06-29 17:23 IST

ಯಾದಗಿರಿ : ಕಳೆದ ಎರಡು ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರು ಎಂಬಲ್ಲಿ ಕುರಿ ಮೇಯಿಸಲು ತೆರಳಿದ ವೇಳೆ ಇಬ್ಬರು ಯುವಕರು ಭೀಮಾ ನದಿಯಲ್ಲಿ ನೀರು ಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 52 ಗಂಟೆಗಳ ನಿರಂತರ ಕಾರ್ಯಾಚರಣೆ ಬಳಿಕ ಓರ್ವನ ಮೃತದೇಹ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಎರಡು ದಿನಗಳ ಬಳಿಕ ಓರ್ವ ಮೃತದೇಹ ಪತ್ತೆಯಾಗಿದ್ದು, ಯುವಕ ನೀರು ಪಾಲಾಗಿರುವ ಸ್ಥಳದಿಂದ 200 ಮೀಟ‌ರ್ ದೂರದಲ್ಲಿ ರಾಮುವಿನ ಮೃತ ದೇಹ ಪತ್ತೆಯಾಗಿದೆ.

ಮತ್ತೊರ್ವ ಯುವಕನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ SDRF ಮತ್ತು ಅಗ್ನಿಶಾಮಕ ದಳ ಹಾಗೂ ನುರಿತ ಮೀನುಗಾರರಿಂದ ಶೋಧ ಕಾರ್ಯ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News